ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಗುಲಾಂ ನಬಿ ಆಜಾದ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ!

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ  ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಜಿಎ ಮಿರ್ ಅವರ ಸ್ಥಾನಕ್ಕೆ ನೇಮಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಗುಲಾಂ ನಬಿ ಆಜಾದ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ  ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಜಿಎ ಮಿರ್ ಅವರ ಸ್ಥಾನಕ್ಕೆ ನೇಮಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.

ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿಯಾಗಿ ಹೆಸರಿಸಬೇಕೆಂಬ ಜಮ್ಮು ಕಾಶ್ಮೀರ ನಾಯಕರ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.  ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಮೊದಲ ಅಸೆಂಬ್ಲಿ ಚುನಾವಣೆ ಈ ವರ್ಷದ ಅಂತ್ಯದ ವೇಳೆಗೆ ನಡೆಯಲಿದೆ.

ಕಾಂಗ್ರೆಸ್ ಹೈಕಮಾಂಡ್ ನಮ್ಮ ಬೇಡಿಕೆಗೆ ಒಪ್ಪಿಗೆ ನೀಡಿದೆ, ಮುಂದಿನ ಕೆಲವೇ ದಿನಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಈ ಸಂಬಂಧ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿವಿಧ ಬಣಗಳಿಗೆ ಸೇರಿದ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಆಜಾದ್ ಅವರ ಹೆಸರನ್ನು ಒಗ್ಗಟ್ಟಿನಿಂದ ಬೆಂಬಲಿಸಿದ್ದಾರೆ ಈ ಭೆಯಲ್ಲಿ ಆಜಾದ್ ಕೂಡ ಭಾಗವಹಿಸಿದ್ದರು.

ಸಭೆಯಲ್ಲಿ ಹಾಜರಿದ್ದ ಎಲ್ಲಾ ನಾಯಕರು ಆಜಾದ್ ಅವರನ್ನು ಚುನಾವಣೆಗೆ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿದರು. ಆಜಾದ್  ಅವರಉಮೇದುವಾರಿಕೆಯನ್ನು ಯಾರೂ ವಿರೋಧಿಸಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಜಿ ಎಂ ಸರೂರಿ ಹೇಳಿದರು.

ಪಕ್ಷದಲ್ಲಿ ಆಜಾದ್ ಅವರಂತ ಮತ್ತೊಬ್ಬ ನಾಯಕರಿಲ್ಲ.  ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಸ್ವೀಕಾರಾರ್ಹರಾಗಿದ್ದಾರೆ. ಅವರನ್ನು ಬಿಟ್ಟು ಪಕ್ಷಕ್ಕೆ ಪರ್ಯಾಯ ನಾಯಕನಿಲ್ಲ, ಆಜಾದ್ ಅವರು  ಜಮ್ಮು-ಕಾಶ್ಮೀರ ಸಿಎಂ ಆಗಿದ್ದ ಅವಧಿಯಲ್ಲಿ ನೀಡಿದ್ದ ಉತ್ತಮ ಆಡಳಿತವನ್ನು ಜನರು ಇನ್ನೂ ನೆನಪಿಸಿಕೊಳ್ಳುತ್ತಾರೆ . ಆಜಾದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಜಿಎ ಮಿರ್ ರಾಜೀನಾಮೆ ನೀಡಿದ ನಂತರ ಆ ಸ್ಥಾನ ತೆರವಾದ ಕಾರಣ ಕಾಂಗ್ರೆಸ್ ಹಿರಿಯ ನಾಯಕ ಆಜಾದ್ ಅವರನ್ನು ನೂತನ ಜೆಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಿಂದ ತಲಾ ಮೂವರಂತೆ ಆರು ಹೆಸರುಗಳು ಕೇಳಿ ಬರುತ್ತಿವೆ. ಜೆಕೆಪಿಸಿ ಉನ್ನತ ಹುದ್ದೆಗೆ ರೇಸ್‌ನಲ್ಲಿರುವವರಲ್ಲಿ ವಿಕರ್ ರಸೂಲ್, ಜಿ ಎಂ ಸರೂರಿ ಮತ್ತು ಮನೋಹರ್ ಲಾಲ್, ಪೀರ್ಜಾದಾ ಮೊಹಮ್ಮದ್ ಸಯೀದ್, ತಾರಿಕ್ ಹಮೀದ್ ಕರ್ರಾ ಮತ್ತು ಗುಲಾಮ್ ನಬಿ ಮೊಂಗಾ ಸೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com