ಕೇರಳದ ಕಣ್ಣೂರಿನಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ದೃಢಪಡಿಸಿದೆ. ಜುಲೈ 13 ರಂದು ದುಬೈನಿಂದ ಆಗಮಿಸಿದ ಕೊಣ್ಣೂರಿನ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್..
ಮಂಕಿಪಾಕ್ಸ್
ಮಂಕಿಪಾಕ್ಸ್

ತಿರುವನಂತಪುರಂ: ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ದೃಢಪಡಿಸಿದೆ. ಜುಲೈ 13 ರಂದು ದುಬೈನಿಂದ ಆಗಮಿಸಿದ ಕೊಣ್ಣೂರಿನ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ದೃಢಪಟ್ಟಿದೆ. ಈ ಹಿಂದೆ ಮೊದಲ ಪ್ರಕರಣ ಕೇರಳದಲ್ಲಿಯೇ ಪತ್ತೆಯಾಗಿತ್ತು.

ಸೋಂಕಿತ ವ್ಯಕ್ತಿ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ತೃಪ್ತಿಕರವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ರೋಗಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜುಲೈ 14 ರಂದು ಅಬುಧಾಬಿಯಿಂದ ಕೇರಳಕ್ಕೆ ಹಿಂದಿರುಗಿದ 35 ವರ್ಷದ ವ್ಯಕ್ತಿಯಲ್ಲಿ ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿತ್ತು. ಅವರು ಪ್ರಸ್ತುತ ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಯೊಂದಿಗೆ ಪ್ರಯಾಣಿಸಿದ ಐದು ಜಿಲ್ಲೆಗಳ 164 ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ.

ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣಗಳಲ್ಲಿ ರೋಗಲಕ್ಷಣಗಳನ್ನು ಹೊಂದಿರುವ ಪ್ರಯಾಣಿಕರನ್ನು ಗುರುತಿಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಸಹಾಯ ಕೇಂದ್ರವನ್ನು ಪ್ರಾರಂಭಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ(WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನೇ ಹೋಲುತ್ತದೆ, ಆದರೂ ಇದು ಪ್ರಾಯೋಗಿಕವಾಗಿ ಇದರ ತೀವ್ರತೆ ಕಡಿಮೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com