ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಟಿಆರ್ ಎಸ್ ಸಂಸದರ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಟಿಆರ್ ಎಸ್ ಸಂಸದರು  ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 
ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಟಿಆರ್ ಎಸ್ ಸಂಸದರು  ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಹಣದುಬ್ಬರ ಏರಿಕೆಯೊಂದಿಗೆ ಅಗತ್ಯವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೇಗೆ ಅವರು ಜೀವನ ಸಾಗಿಸುತ್ತಾರೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ  ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು.  ಇನ್ನೊಂದೆಡೆ  ಇದೇ ವಿಚಾರವಾಗಿ ಆರ್ ಆರ್ ಎಸ್ ಸಂಸದರು ಕೂಡಾ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com