ಜಮ್ಮು-ಕಾಶ್ಮೀರ ಪೊಲೀಸರ ಭರ್ಬರಿ ಬೇಟೆ: ರಾಜೌರಿಯಲ್ಲಿ 4 ಲಷ್ಕರ್ ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡು ವಶ!

ರಜೌರಿ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಜಾಲವನ್ನು ಬೇಧಿಸಿ ನಾಲ್ವರನ್ನು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ರಜೌರಿ(ಜಮ್ಮು ಮತ್ತು ಕಾಶ್ಮೀರ): ರಜೌರಿ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಜಾಲವನ್ನು ಬೇಧಿಸಿ ನಾಲ್ವರನ್ನು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಲಷ್ಕರ್ ಕಮಾಂಡರ್, ರಾಜೌರಿಯ ದರ್ಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಮತ್ತು ಅವನ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಪಿರ್ ಪಂಜಾಲ್ ಪ್ರದೇಶದಲ್ಲಿ ನಡೆದ ಎಲ್ಲಾ ಪ್ರಮುಖ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾನೆ.

'ಭದ್ರತಾ ಪಡೆಗಳು, ಅಲ್ಪಸಂಖ್ಯಾತ ಸಮುದಾಯ ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ವ್ಯಕ್ತಿಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸುವ ಕಾರ್ಯವನ್ನು ಅವನಿಗೆ ವಹಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರು ಐದು ಕ್ರಿಮಿನಲ್ ಮತ್ತು ಭಯೋತ್ಪಾದನೆ ಸಂಬಂಧಿತ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್ ಗ್ರೆನೇಡ್‌ಗಳು, ಎರಡು ಎಕೆ 47 ರೈಫಲ್‌ಗಳು, ಮೂರು ಎಕೆ 47 ಮ್ಯಾಗಜೀನ್‌ಗಳು, ಎರಡು ಪಿಸ್ತೂಲ್‌ಗಳು, ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು 5 ಕೆಜಿ ಐಇಡಿ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಭಾರತೀಯ ಕರೆನ್ಸಿಗಳನ್ನು ಪಡೆದ ಐದು ಪ್ರಮುಖ ಡ್ರೋನ್ ಶೂಟಿಂಗ್ ಘಟನೆಗಳಲ್ಲಿ ತಾಲಿಬ್ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com