ದೆಹಲಿಯಲ್ಲಿ ಭಾರೀ ಮಳೆ: 7 ವಿಮಾನಗಳ ಮಾರ್ಗ ಬದಲಾವಣೆ, 40 ವಿಮಾನ ವಿಳಂಬ

ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಏಳು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಅಲ್ಲದೆ 40 ವಿಮಾನ ಸೇವೆಗಳು ವಿಳಂಬವಾಗಿವೆ ಎಂದು ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಏಳು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಅಲ್ಲದೆ 40 ವಿಮಾನ ಸೇವೆಗಳು ವಿಳಂಬವಾಗಿವೆ ಎಂದು ವರದಿಯಾಗಿದೆ.

ಬುಧವಾರ ಕೆಟ್ಟ ಹವಾಮಾನದಿಂದಾಗಿ ಕನಿಷ್ಠ 25 ವಿಮಾನಗಳ ನಿರ್ಗಮನ ಮತ್ತು 15 ವಿಮಾನಗಳ ಆಗಮನ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯಿಂದಾಗಿ ನಗರದ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಮುಂಬೈ-ದೆಹಲಿ ಎರಡು ವಿಮಾನಗಳನ್ನು ಜೈಪುರ ಮತ್ತು ಇಂದೋರ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಸ್ತಾರಾ ಟ್ವಿಟರ್‌ನಲ್ಲಿ ತಿಳಿಸಿದೆ.

ದೆಹಲಿಯಲ್ಲಿ ಕನಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ಸಾಧ್ಯತೆಯಿದೆ. ಭಾರತದ ಹವಾಮಾನ ಇಲಾಖೆ (IMD) ಎರಡು-ಮೂರು ದಿನಗಳ ಕಾಲ ವಾಯುವ್ಯ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com