ಸುಪ್ರೀಂ ಕೋರ್ಟ್ ಜಾಮೀನು: ತಿಹಾರ್‌ ಜೈಲಿನಿಂದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಜುಬೇರ್ ಬಿಡುಗಡೆ!

ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳಲ್ಲೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಗಂಟೆಗಳ ನಂತರ ತಿಹಾರ್‌ನಿಂದ ಬಿಡುಗಡೆಗೊಂಡಿದ್ದಾರೆ.
ಮೊಹಮ್ಮದ್ ಜುಬೈರ್
ಮೊಹಮ್ಮದ್ ಜುಬೈರ್

ನವದೆಹಲಿ: ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳಲ್ಲೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಗಂಟೆಗಳ ನಂತರ ತಿಹಾರ್‌ನಿಂದ ಬಿಡುಗಡೆಗೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು  ತಿಳಿಸಿದ್ದಾರೆ.

ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27ರಂದು ದೆಹಲಿ ಪೊಲೀಸರು ಜುಬೇರ್ ಅವರನ್ನು ಬಂಧಿಸಿದ್ದರು.

ಉತ್ತರಪ್ರದೇಶದಲ್ಲಿ ಜುಬೈರ್ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು ಹತ್ರಾಸ್‌ನಲ್ಲಿ ಎರಡು ಮತ್ತು ಸೀತಾಪುರ್, ಲಖಿಂಪುರ ಖೇರಿ, ಮುಜಾಫರ್‌ನಗರ, ಘಾಜಿಯಾಬಾದ್ ಮತ್ತು ಚಂದೌಲಿ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಜುಬೈರ್‌ನನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್  ಆದೇಶ ನೀಡಿತು. ಅಲ್ಲದೆ ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿದೆ.

ನ್ಯಾಯಾಲಯವು ಜುಬೈರ್ ಸ್ವಾತಂತ್ರ್ಯದ ಹರಣಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಯನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿತು. ಅಲ್ಲದೆ ಯುಪಿ ಪೋಲಿಸ್ ರಚಿಸಿದ್ದ ಎಸ್‌ಐಟಿಯನ್ನು ವಿಸರ್ಜಿಸುವಂತೆ ಆದೇಶಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com