2018ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಮಾಣ ಗಣನೀಯವಾಗಿ ಕುಸಿದಿದೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

2018ರಿಂದ 2022ರವರೆಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2018ರಿಂದ 2022ರವರೆಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇಂದು ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು, 'ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರಿಂದ ಭಯೋತ್ಪಾದಕ ದಾಳಿಯ ಘಟನೆಗಳು ಗಣನೀಯವಾಗಿ ಕಡಿಮೆಯಾಗಿದೆ. 2018ರಲ್ಲಿ 417 ಉಗ್ರದಾಳಿ ಪ್ರಕರಣಗಳು ದಾಖಲಾಗಿದ್ದರೆ, 2019ರಲ್ಲಿ 255, 2020ರಲ್ಲಿ 244 ಮತ್ತು 2021ರಲ್ಲಿ 229 ಉಗ್ರ ದಾಳಿ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಕಣಿವೆಯಲ್ಲಿ 5.2 ಲಕ್ಷ ಜನರಿಗೆ ಉದ್ಯೋಗ
ಅಂತೆಯೇ  ಆಗಸ್ಟ್ 2019 ರಿಂದ ಜೂನ್ 2022 ರವರೆಗೆ ಸ್ವಯಂ ಉದ್ಯೋಗ ಯೋಜನೆಗಳ ಮೂಲಕ 5.2 ಲಕ್ಷ ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ಅಂದಾಜಿದೆ ಎಂದು ಸಚಿವರು ಮಾಹಿತಿ ನೀಡಿದರು. 

ಜಮ್ಮು ಮತ್ತು ಕಾಶ್ಮೀರ ಆಡಳಿತವು 2019 ರಿಂದ ಸಾರ್ವಜನಿಕ ವಲಯದಲ್ಲಿ ಸುಮಾರು 30,000 ಜನರನ್ನು ನೇಮಿಸಿಕೊಂಡಿದೆ. ಆಗಸ್ಟ್ 2019 ರಿಂದ ಜೂನ್ 2022 ರವರೆಗೆ ಸ್ವಯಂ ಉದ್ಯೋಗ ಯೋಜನೆಗಳ ಮೂಲಕ 5.2 ಲಕ್ಷ ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ಅಂದಾಜಿದೆ ಎಂದು ಸಚಿವ ನಿತ್ಯಾನಂದ ರೈ ಹೇಳಿದ್ದಾರೆ. 

ಲಿಖಿತ ಪ್ರಶ್ನೆಗೆ ಉತ್ತರವಾಗಿ, "ಜಮ್ಮು ಮತ್ತು ಕಾಶ್ಮೀರ ಸರ್ಕಾರವು 2019 ರಿಂದ ಸಾರ್ವಜನಿಕ ವಲಯದಲ್ಲಿ ಒಟ್ಟು 29,806 ನೇಮಕಾತಿಗಳನ್ನು ಮಾಡಿದೆ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದುಗೊಳಿಸಲಾಯಿತು ಮತ್ತು ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಕೇಂದ್ರದ ಆಡಳಿತದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com