ಟ್ರಕ್ ಗುದ್ದಿಸಿ ಡಿಎಸ್‌ಪಿ ಹತ್ಯೆ: ಗುಂಡು ಹಾರಿಸಿ ಚಾಲಕನನ್ನು ಬಂಧಿಸಿದ ಪೊಲೀಸರು

ಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ ತಪಾಸಣೆಯ ವೇಳೆ ಪೊಲೀಸ್ ಅಧಿಕಾರಿಗೆ ಟ್ರಕ್ ಗುದ್ದಿಸಿ ಹತ್ಯೆ ಮಾಡಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಿತ್ತರ್
ಆರೋಪಿ ಮಿತ್ತರ್

ಜೈಪುರ: ಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ ತಪಾಸಣೆಯ ವೇಳೆ ಪೊಲೀಸ್ ಅಧಿಕಾರಿಗೆ ಟ್ರಕ್ ಗುದ್ದಿಸಿ ಹತ್ಯೆ ಮಾಡಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 

ಮಿತ್ತರ್ ಎಂದು ಗುರುತಿಸಲಾದ ಚಾಲಕನನ್ನು ಭರತ್‌ಪುರ ಜಿಲ್ಲೆಯ ಗಂಘೋರಾ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ನಿನ್ನೆ ನುಹ್‌ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದಾಗ ಅವರ ಮೇಲೆ ವಾಹನ ಹರಿಸಿ ಹತ್ಯೆ ಮಾಡಲಾಗಿತ್ತು.

ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಮಾಹಿತಿ ಪಡೆದಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದರು.

ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ದಾರಿಯಲ್ಲಿ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್‌ನ ಚಾಲಕ ಆತನ ಮೇಲೆ ಹರಿದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನಿಬ್ಬರು ಪೊಲೀಸರು ಪಕ್ಕಕ್ಕೆ ಹಾರಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂತರ ಆರೋಪಿಗಳು ಪ್ರದೇಶದಿಂದ ಪರಾರಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com