ಜುಲೈ 25ಕ್ಕೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಇಡಿ ಸಮನ್ಸ್

ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಕೋವಿಡ್-19 ನಿಂದ ಚೇತರಿಸಿಕೊಂಡಿರುವ 73 ವರ್ಷದ ಸೋನಿಯಾ ಗಾಂಧಿ ಅವರನ್ನು ಇಂದು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಆಕೆಯ ಮನವಿ ಮೇರೆಗೆ ವಿಚಾರಣೆಯನ್ನು ಅಂತ್ಯಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಮುಂದಿನ ವಿಚಾರಣೆ ಇಲ್ಲ ಎಂದು ಇಡಿ ಸೋನಿಯಾ ಗಾಂಧಿಗೆ ತಿಳಿಸಿರುವುದಾಗಿ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಹೇಳಿದ್ದಾರೆ. 

ಇತರ ಯಾವುದೇ ವಿಚಾರಣೆಯಿದ್ದರೆ ಅಗತ್ಯವಿದ್ದರೆ ರಾತ್ರಿ 8 ಗಂಟೆಯಲ್ಲ, 9 ಗಂಟೆಯವರೆಗೂ ಉತ್ತರಿಸಲು ಸೋನಿಯಾ ಗಾಂಧಿ ಸಿದ್ದರಿದ್ದರು ಎಂದು ರಮೇಶ್ ಟ್ವೀಟರ್ ಫೋಸ್ಟ್ ನಲ್ಲಿ ತಿಳಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅಂತಾ ಇಡಿ ಏನನ್ನೂ ಕೇಳಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಸೋನಿಯಾ ಗಾಂಧಿ ಹೇಳಿರುವುದಾಗಿ ರಮೇಶ್ ತಿಳಿಸಿದ್ದಾರೆ.

ಮತ್ತೆ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಆಕೆಯ ಒತ್ತಾಯದ ಮೇರೆಗೆ ಜುಲೈ 25 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com