ಜ್ಞಾನವಾಪಿ ಮಸೀದಿ ವಿವಾದ: ವಾರಣಾಸಿ ಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'; ವಿಚಾರಣೆ ಆಕ್ಟೋಬರ್ ಗೆ ಮುಂದೂಡಿಕೆ

ತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ.
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ.

ಹೌದು.. ಜ್ಞಾನವಾಪಿ ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಕ್ಟೋಬರ್‌ ಮೊದಲ ವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಗುರುವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ಸೂರ್ಯಕಾಂತ್‌ ಮತ್ತು ಪಿ.ಎಸ್‌.ನರಸಿಂಹ ಅವರಿದ್ದ ಪೀಠವು, ಹಿಂದೂ ಭಕ್ತರು ಸಲ್ಲಿಸಿರುವ ಸಿವಿಲ್‌ ಮೊಕದ್ದಮೆಯನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿಯು ಅರ್ಜಿಯಲ್ಲಿ ಎತ್ತಿರುವ ಆಕ್ಷೇಪಣೆಗೆ ಸಂಬಂಧಿಸಿ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರು ಕೈಗೊಳ್ಳುವ ತೀರ್ಮಾನಕ್ಕೆ ಎದುರು ನೋಡಲಾಗುತ್ತಿದೆ ಎಂದು ಹೇಳಿದೆ.

ತ್ರಿಸದಸ್ಯ ಪೀಠವು, ಜಿಲ್ಲಾ ನ್ಯಾಯಾಧೀಶರ ಮುಂದೆ ಈ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದ್ದು, ಇದು ಪೂರ್ಣವಾಗುವವರೆಗೆ, ತೀರ್ಪು ಹೊರಬೀಳುವವರೆಗೂ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯನ್ನು ಬಾಕಿ ಇರಿಸುವುದು ಸೂಕ್ತ ಎಂದು ‌ಅಭಿಪ್ರಾಯಪಟ್ಟಿದೆ. ಅಲ್ಲದೆ ಇದೊಂದು ಸಂಕೀರ್ಣ ಮತ್ತು ಸೂಕ್ಷ್ಮ ವಿಚಾರ. ಈ ಪ್ರಕರಣವನ್ನು 25-30 ವರ್ಷಗಳ ಕಾಲ ನಿರ್ವಹಿಸಿರುವ ನ್ಯಾಯಾಂಗದ ಹಿರಿಯ ಅಧಿಕಾರಿಗಳೇ ನಿಭಾಯಿಸುವುದು ಉತ್ತಮ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಮೇ 20ರಂದು ಸುಪ್ರೀಂ ಕೋರ್ಟ್‌, ಜ್ಞಾನವಾಪಿ ಮಸೀದಿ‌ ಬಗ್ಗೆ ಹಿಂದೂ ಭಕ್ತರು ಸಲ್ಲಿಸಿದ್ದ ಸಿವಿಲ್ ಮೊಕದ್ದಮೆಯನ್ನು ವಾರಾಣಸಿಯ ಸಿವಿಲ್ ನ್ಯಾಯಾಲಯದಿಂದ (ಹಿರಿಯ ವಿಭಾಗ) ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿತ್ತು. ಮೇ 17 ರಂದು ತನ್ನ ಮಧ್ಯಂತರ ಆದೇಶವನ್ನು ಜಾರಿಗೊಳಿಸಿದ್ದ ವಾರಣಾಸಿ ಕೋರ್ಟ್, ಶಿವಲಿಂಗ ಪತ್ತೆಯಾದ ಪ್ರದೇಶವನ್ನು ರಕ್ಷಿಸಲು ಮತ್ತು ನಮಾಜ್‌ಗಾಗಿ ಮುಸ್ಲಿಮರಿಗೆ ಪ್ರವೇಶ ನೀಡಲು ಅನುಮತಿ ನೀಡಿತ್ತು. ಅಂತೆಯೇ ಮೊಕದ್ದಮೆಯ ನಿರ್ವಹಣೆಯನ್ನು ನಿರ್ಧರಿಸುವವರೆಗೆ ಮಸೀದಿ ಕಾರ್ಯ ನಿರ್ವಹಣೆ ಎದಿನಂತೆ ಮುಂದುವರಿಯುತ್ತದೆ ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com