ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೂರನೇ ಬಾರಿ ಅಗ್ರಸ್ಥಾನ

ನೀತಿ ಆಯೋಗ ಗುರುವಾರ ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-2021 ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರ ಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.
ವಿಧಾನಸೌಧ
ವಿಧಾನಸೌಧ

ನವದೆಹಲಿ: ನೀತಿ ಆಯೋಗ ಗುರುವಾರ ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-2021 ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರ ಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.

ನೀತಿ ಆಯೋಗ ಬಿಡುಗಡೆ ಮಾಡಿರುವ ಮೂರನೇ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಪ್ರಮುಖ ರಾಜ್ಯಗಳ ಪೈಕಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕ ಪಟ್ಟಿಯು ರಾಷ್ಟ್ರೀಯ ಮಟ್ಟದಲ್ಲಿ ನಾವೀನ್ಯತೆ ಸಾಮರ್ಥ್ಯಗಳು ಮತ್ತು ಪರಿಸರ ವ್ಯವಸ್ಥೆಗಳನ್ನು ಪರಿಶೀಲಿಸುತ್ತದೆ.

ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರ ಸಮ್ಮುಖದಲ್ಲಿ ಆವಿಷ್ಕಾರ ಸೂಚ್ಯಂಕ ಪಟ್ಟಿ ಬಿಡುಗಡೆ ಮಾಡಿದ್ದು, ಈ ಸೂಚ್ಯಂಕವನ್ನು ಜಾಗತಿಕ ಆವಿಷ್ಕಾರ ಸೂಚ್ಯಂಕದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇಂಡಿಯಾ ಇನ್ನೋವೇಶನ್ ಇಂಡೆಕ್ಸ್‌ನ ಮೊದಲ ಮತ್ತು ಎರಡನೇ ಆವೃತ್ತಿಗಳನ್ನು ಕ್ರಮವಾಗಿ ಅಕ್ಟೋಬರ್ 2019 ಮತ್ತು ಜನವರಿ 2021 ರಲ್ಲಿ ಬಿಡುಗಡೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com