ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ ಇಡಿ ವಿಚಾರಣೆ ಮುಕ್ತಾಯ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸಿತು.
Published: 21st July 2022 04:53 PM | Last Updated: 21st July 2022 04:53 PM | A+A A-

ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಇಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸಿತು.
ಸುಮಾರು ಮೂರು ಗಂಟೆಗಳ ವಿಚಾರಣೆ ಬಳಿಕ ಸೋನಿಯಾ ಗಾಂಧಿ ಅವರು ಇಡಿ ಕಚೇರಿಯಿಂದ ನಿರ್ಗಮಿಸಿದರು ಎಂದು ಇಡಿ ಮೂಲಗಳು ತಿಳಿಸಿವೆ.
ಇದನ್ನು ಓದಿ: ದೆಹಲಿಯ ಇಡಿ ಕಚೇರಿಗೆ ಸೋನಿಯಾ ಗಾಂಧಿ ಆಗಮನ: ಇಡಿ ವಿಚಾರಣೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಗದ್ದಲ ನುಂಗಿಹಾಕಿದ ಸಂಸತ್ತು ಕಲಾಪ
75 ವರ್ಷದ ಸೋನಿಯಾ ಗಾಂಧಿ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಝೆಡ್ ಪ್ಲಸ್ ಭದ್ರತೆಯೊಂದಿಗೆ ಮಧ್ಯ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ವಿದ್ಯುತ್ ಲೇನ್‌ನಲ್ಲಿರುವ ಫೆಡರಲ್ ತನಿಖಾ ಸಂಸ್ಥೆಯ ಪ್ರಧಾನ ಕಛೇರಿ ಆಗಮಿಸಿದರು.
ಕೋವಿಡ್ ಪ್ರೋಟೋಕಾಲ್‌ಗಳನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಲಾಗಿದ್ದು, ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದ ಸಹಾಯಕ ನಿರ್ದೇಶಕ ಮಟ್ಟದ ತನಿಖಾ ಅಧಿಕಾರಿಯೇ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳ ತಂಡದಲ್ಲಿ ಮಹಿಳಾ ಅಧಿಕಾರಿಯೂ ಇದ್ದು, ಆ ಎಲ್ಲಾ ಅಧಿಕಾರಿಗಳು 'ಕೋವಿಡ್ ನೆಗೆಟಿವ್' ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.