ಅವಿವಾಹಿತ ಮಹಿಳೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮಹಿಳೆ ಅವಿವಾಹಿತೆ ಎಂಬ ಕಾರಣಕ್ಕೆ ಆಕೆಯ ಗರ್ಭಪಾತಕ್ಕೆ ಅವಕಾಶವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಹಿಳೆ ಅವಿವಾಹಿತೆ ಎಂಬ ಕಾರಣಕ್ಕೆ ಆಕೆಯ ಗರ್ಭಪಾತಕ್ಕೆ ಅವಕಾಶವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಲಿವ್-ಇನ್ ಸಂಬಂಧದಿಂದ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಆಕೆಯ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡಿದ್ದು, ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು ವೈದ್ಯಕೀಯ ಮಂಡಳಿ ಸ್ಥಾಪಿಸಿ ಮಹಿಳೆಗೆ ಯಾವುದೇ ಅಪಾಯವಾಗದಂತೆ ಗರ್ಭಪಾತ ಮಾಡಿಸಲು ಸೂಚಿಸಿದೆ.

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಗಂಡ ಎಂಬ ಬದಲು ಸಂಗಾತಿ ಎಂಬ ಪದ ಬಳಸಲಾಗಿದೆ. ಇದು ಈ ಕಾಯ್ದೆಯಲ್ಲಿ ಅವಿವಾಹಿತ ಮಹಿಳೆಯನ್ನು ಕೂಡ ಒಳಗೊಳ್ಳಲು ಇರುವ ಶಾಸನದ ಉದ್ದೇಶವನ್ನು ತೋರಿಸುತ್ತದೆ ಎಂದು ಕೋರ್ಟ್ ಹೇಳಿದೆ. 

ಅವಿವಾಹಿತೆ ಎಂಬ ಕಾರಣಕ್ಕೆ ಅರ್ಜಿದಾರಳಿಗೆ ಈ ಪ್ರಯೋಜನವನ್ನು ನಿರಾಕರಿಸುವಂತಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ತನಗೆ ಬೇಡವಾದ ಭ್ರೂಣವನ್ನು ವಿಧಿಯಿಲ್ಲದೆ ಅನುಭವಿಸುವಂತೆ ಒತ್ತಾಯಿಸುವುದು ಸಂಸದೀಯ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com