'ದ್ರೌಪದಿ ಮುರ್ಮು' ಭಾರತಕ್ಕೆ ಸಿಕ್ಕ ಅತ್ಯಂತ ಕಿರಿಯ ಹಾಗೂ ಸ್ವಾತಂತ್ರ್ಯ ನಂತರ ಜನಿಸಿದ ಮೊದಲ ರಾಷ್ಟ್ರಪತಿ!

ಒಡಿಶಾದಲ್ಲಿ ಕೌನ್ಸಿಲರ್ ಆಗಿ ರಾಜಕೀಯ ಜೀವನ ಪ್ರಾರಂಭಿಸಿದ ಮತ್ತು ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿ ದ್ರೌಪತಿ ಮುರ್ಮು. ಇನ್ನು ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಖ್ಯಾತಿಗೆ ಅವರು ಭಾಜನರಾಗಿದ್ದಾರೆ.
ಮೋದಿ-ದ್ರೌಪದಿ ಮುರ್ಮು
ಮೋದಿ-ದ್ರೌಪದಿ ಮುರ್ಮು

ನವದೆಹಲಿ: ಒಡಿಶಾದಲ್ಲಿ ಕೌನ್ಸಿಲರ್ ಆಗಿ ರಾಜಕೀಯ ಜೀವನ ಪ್ರಾರಂಭಿಸಿದ ಮತ್ತು ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿ ದ್ರೌಪತಿ ಮುರ್ಮು. ಇನ್ನು ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಖ್ಯಾತಿಗೆ ಅವರು ಭಾಜನರಾಗಿದ್ದಾರೆ. 

ಜಾರ್ಖಂಡ್‌ನ ಮಾಜಿ ಗವರ್ನರ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ತಮ್ಮ ಪ್ರಚಾರದ ವೇಳೆ ಅನೇಕ ಬೆಂಬಲಿಗರನ್ನು ಸೃಷ್ಟಿಕೊಂಡಿದ್ದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಸುಲಭ ಜಯ ಸಾಧಿಸಿದ್ದಾರೆ. 

ತಮ್ಮ 64ನೇ ವಯಸ್ಸಿನಲ್ಲಿ ರಾಮನಾಥ್ ಕೋವಿಂದ್ ಅವರಿಂದ ಅಧಿಕಾರ ವಹಿಸಿಕೊಳ್ಳುವ ಭಾರತದ 15ನೇ ರಾಷ್ಟ್ರಪತಿಯಾಗಲಿರುವ ಮಹಿಳೆ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯದ ನಂತರ ಜನಿಸಿದ ಭಾರತದ ಅತ್ಯಂತ ಕಿರಿಯ ಮತ್ತು ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ಮುರ್ಮು ಅವರು ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮುರ್ಮು ಗೆಲುವಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಸಚಿವರು ಸೇರಿದಂತೆ ಹಲವಾರು ನಾಯಕರು ಶುಭಾಶಯ ತಿಳಿಸಿದ್ದಾರೆ.

ಮುರ್ಮು ಅವರು ಕೆಳಮಟ್ಟದ ರಾಜಕಾರಣಿ, ಆಳವಾದ ಆಧ್ಯಾತ್ಮಿಕ ಮತ್ತು ಬ್ರಹ್ಮ ಕುಮಾರಿಯರ ಧ್ಯಾನ ತಂತ್ರಗಳ ತೀವ್ರ ಅಭ್ಯಾಸಿ ಎಂದು ನಂಬಲಾಗಿದೆ. 2009-2015ರ ನಡುವಿನ ಕೇವಲ ಆರು ವರ್ಷಗಳಲ್ಲಿ ತನ್ನ ಪತಿ, ಇಬ್ಬರು ಪುತ್ರರು, ತಾಯಿ ಮತ್ತು ಸಹೋದರನನ್ನು ಕಳೆದುಕೊಂಡ ನಂತರ ಅವರು ಆಧ್ಯಾತ್ಮವನ್ನು ಸ್ವೀಕರಿಸಿದ್ದರು. ಮುರ್ಮು ಅವರು ಆಳವಾದ ಆಧ್ಯಾತ್ಮಿಕ ಮತ್ತು ಮೃದು ಸ್ವಭಾವದ ವ್ಯಕ್ತಿ ಎಂದು ಬಿಜೆಪಿ ನಾಯಕ ಮತ್ತು ಲೋಕಸಭಾ ಸದಸ್ಯ ಬಸಂತ್ ಕುಮಾರ್ ಪಾಂಡ ಹೇಳಿದ್ದಾರೆ.

ಫೆಬ್ರವರಿ 2016ರಲ್ಲಿ ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ ಮುರ್ಮು ಅವರು 2009ರಲ್ಲಿ ತನ್ನ ಮಗನನ್ನು ಕಳೆದುಕೊಂಡಾಗ ಅವರ ಜೀವನದ ಪ್ರಕ್ಷುಬ್ಧ ಕ್ಷಣವನ್ನು ವಿವರಿಸಿದ್ದರು. ನಾನು ಮನಸ್ಸು ಹೊಡೆದು ಹೋಗಿತ್ತು. ಖಿನ್ನತೆಗೆ ಜಾರಿದ್ದೆ. ನನ್ನ ಮಗನ ಸಾವಿನ ನಂತರ ನಾನು ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೆ. ನಾನು ಬ್ರಹ್ಮಕುಮಾರಿಯರನ್ನು ಭೇಟಿ ಮಾಡಿದಾಗ ನನ್ನ ಇಬ್ಬರು ಪುತ್ರರು ಮತ್ತು ಮಗಳಿಗಾಗಿ ಬದುಕಬೇಕು ಎಂದು ನಾನು ಅರಿತುಕೊಂಡೆ ಎಂದು ಮುರ್ಮು ಹೇಳಿದ್ದರು.

ಜೂನ್ 21 ರಂದು ಅವರು ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡ ನಂತರ ಒಂದು ತಿಂಗಳಲ್ಲಿ ಅವರು ಯಾವುದೇ ಸಾರ್ವಜನಿಕ ಹೇಳಿಕೆ ನೀಡಿಲ್ಲ.

ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ಸಂತಲ್ ಸಮುದಾಯದಲ್ಲಿ ಜನಿಸಿರುವ ಮುರ್ಮು 1997ರಲ್ಲಿ ರೈರಂಗ್ ಪುರ್ ನಗರ ಪಂಚಾಯತ್ ನಿಂದ ಕೌನ್ಸಿಲರ್ ಆಗಿ ವೃತ್ತಿಜೀವನ ಆರಂಭಿಸಿದರು. 2000ದಲ್ಲಿ ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವೆಯಾಗಿದ್ದರು. ನಂತರ 2015ರಲ್ಲಿ ಜಾರ್ಖಂಡ್ ಸರ್ಕಾರದಲ್ಲಿ ಗವರ್ನರ್ ಆಗಿದ್ದರು. ರೈರಂಗ್ ಪುರ್ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕಿಯಾಗಿದ್ದರು. 2009ರಲ್ಲಿ ಬಿಜೆಪಿ ಮೈತ್ರಿಯಿಂದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಕ್ಷವಾದ ಬಿಜೆಡಿ ಹೊರಬಂದಿದ್ದ ವೇಳೆ ಮುರ್ಮು ಶಾಸಕಿಯಾಗಿದ್ದರು.

ಒಡಿಶಾದ ಹಿಂದುಳಿದ ಜಿಲ್ಲೆಯಾದ ಮಯೂರ್‌ಭಂಜ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಡ ಬುಡಕಟ್ಟು ಕುಟುಂಬದಿಂದ ಬಂದ ದ್ರೌಪದಿ ಮುರ್ಮು ಸವಾಲುಗಳ ನಡುವೆಯೂ ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ್ದರು. ಅವರು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com