ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 21,880 ಹೊಸ ಪ್ರಕರಣ, 60 ಸಾವು

ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  21,880 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,482 ಆಗಿದೆ. ಕಳೆದ 24 ಗಂಟೆಗಳಲ್ಲಿ 21,219 ಮಂದಿ ಗುಣಮುಖರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  21,880 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,482 ಆಗಿದೆ. ಕಳೆದ 24 ಗಂಟೆಗಳಲ್ಲಿ 21,219 ಮಂದಿ ಗುಣಮುಖರಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ 60 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 5,25,930 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 4 ಕೋಟಿಯ 31 ಲಕ್ಷದ 71 ಸಾವಿರದ 653 ಮಂದಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಶೇಕಡಾ 0.34 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣವು ಶೇ. 98.46  ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

201.30 ಕೋಟಿ ಒಟ್ಟು ಲಸಿಕೆಗಳನ್ನು ಇದುವರೆಗೆ ಕೋವಿಡ್ ಲಸಿಕೆ ಅಭಿಯಾನದಡಿ ನೀಡಲಾಗಿದ್ದು ಕಳೆದ 24 ಗಂಟೆಗಳಲ್ಲಿ 37 ಲಕ್ಷದ 06 ಸಾವಿರದ 997 ಮಂದಿಗೆ ನೀಡಲಾಗಿದೆ. 87.16 ಕೋಟಿ ಒಟ್ಟು ಪರೀಕ್ಷೆಗಳನ್ನು ಇದುವರೆಗೆ ಮಾಡಲಾಗಿದ್ದು, ಕಳೆದ ಒಂದು ದಿನದಲ್ಲಿ 4,95,359 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com