ದೆಹಲಿ ಸರ್ಕಾರದ ಅಬಕಾರಿ ನೀತಿ ಬಗ್ಗೆ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿ, 2021-22ರ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ...
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿ, 2021-22ರ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಿಎನ್ ಸಿಟಿಡಿ ಕಾಯಿದೆ 1991, ವ್ಯವಹಾರ ನಿಯಮಗಳ ವಹಿವಾಟು(ToBR)-1993, ದೆಹಲಿ ಅಬಕಾರಿ ಕಾಯ್ದೆ-2009 ಮತ್ತು ದೆಹಲಿ ಅಬಕಾರಿ ನಿಯಮಗಳು-2010 ಅನ್ನು ಉಲ್ಲಂಘಿಸಲಾಗಿದೆ ಎಂದು ದೆಹಲಿ ಮುಖ್ಯ ಕಾರ್ಯದರ್ಶಿಯವರು ನೀಡಿದ ವರದಿಯ ಆಧಾರದ ಮೇಲೆ ಈ ತಿಂಗಳ ಆರಂಭದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರ ಹೊರತಾಗಿ ಟೆಂಡರ್ ನಂತರ "ಮದ್ಯ ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು" ಒದಗಿಸಲು "ಉದ್ದೇಶಪೂರ್ವಕ ಮತ್ತು ಸಮಗ್ರ ಕಾರ್ಯವಿಧಾನದ ಲೋಪಗಳು" ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಅಬಕಾರಿ ನೀತಿ 2021-22 ಅನ್ನು ಕಳೆದ ವರ್ಷ ನವೆಂಬರ್ 17 ರಿಂದ ಜಾರಿಗೆ ತರಲಾಗಿದ್ದು, ಅದರ ಅಡಿಯಲ್ಲಿ ನಗರದಾದ್ಯಂತ 849 ಮಾರಾಟಗಾರರಿಗೆ ಚಿಲ್ಲರೆ ಪರವಾನಗಿಗಳನ್ನು 32 ವಲಯಗಳಾಗಿ ವಿಂಗಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com