ಮುಖೇಶ್ ಅಂಬಾನಿ ಕುಟುಂಬದ ಭದ್ರತೆ ಮುಂದುವರಿಸಲು ಕೇಂದ್ರಕ್ಕೆ ಸುಪ್ರೀಂ ಅನುಮತಿ

ಮುಂಬೈನಲ್ಲಿರುವ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.
ಮುಖೇಶ್ ಅಂಬಾನಿ
ಮುಖೇಶ್ ಅಂಬಾನಿ

ನವದೆಹಲಿ: ಮುಂಬೈನಲ್ಲಿರುವ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್ ನೀಡಿದ್ದ ನಿರ್ದೇಶನ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಭದ್ರತೆ ಮುಂದುವರೆಸಲು ಅನುಮತಿ ನೀಡಿದೆ.

ಮುಂಬೈನಲ್ಲಿರುವ ಉದ್ಯಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜೂನ್ 29 ರಂದು ತಡೆ ನೀಡಿತ್ತು.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ತ್ರಿಪುರಾದಲ್ಲಿರುವ ಪಿಐಎಲ್ ಅರ್ಜಿದಾರರಿಗೂ(ಬಿಕಾಶ್ ಸಹಾ) ಮುಂಬೈನಲ್ಲಿರುವ ವ್ಯಕ್ತಿಗಳ ಭದ್ರತೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com