ಮೊದಲಿನಂತೆಯೇ ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ: ಮೊಹಮ್ಮದ್ ಜುಬೇರ್

ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ನಂತರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಮೊದಲಿನಂತೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ಮೊಹಮ್ಮದ್ ಜುಬೈರ್
ಮೊಹಮ್ಮದ್ ಜುಬೈರ್

ನವದೆಹಲಿ: ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ನಂತರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಮೊದಲಿನಂತೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು. 'ಗೌರವಾನ್ವಿತ ನ್ಯಾಯಾಲಯವು ಯಾವುದೇ ನಿರ್ಬಂಧವನ್ನು ಹಾಕದ ಕಾರಣ ನಾನು ಹಿಂದಿನಂತೆ ನನ್ನ ಕೆಲಸವನ್ನು ಮಾಡುತ್ತೇನೆ' ಎಂದು ಮೊಹಮ್ಮದ್ ಜುಬೇರ್ ಹೇಳಿದರು.

ಬುಧವಾರ ಜುಬೇರ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ಸುಪ್ರೀಂ ಕೋರ್ಟ್, ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು ಎಂಬುದು ಕಾನೂನಿನ ನಿಯಮವಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ಸುತ್ತಿನ ವಿಚಾರಣೆಗೆ ಒಳಪಡಿಸಲು ಯಾವುದೇ ಸಮರ್ಥನೆ ಇಲ್ಲ ಎಂದಿತ್ತು.

ನ್ಯಾಯಾಲಯವು ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರಪ್ರದೇಶದಲ್ಲಿ ವಿಶೇಷ ತನಿಖೆಯನ್ನು ರದ್ದುಗೊಳಿಸಿತು ಮತ್ತು ಎಲ್ಲಾ ಯುಪಿ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.

ತಮ್ಮ ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27ರಂದು ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com