ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ  ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು:  ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ  ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.

ನಿನ್ನೆ ರಾತ್ರಿ 21.40 ರ ಸುಮಾರಿಗೆ ಜಮ್ಮುವಿನ ಕನ್ಹಚಕ್ ಪ್ರದೇಶದಲ್ಲಿ ಪಾಕಿಸ್ತಾನದ ಕಡೆಯಿಂದ ಡ್ರೋಣ್ ಲೈಟಿಂಗ್ ನ್ನು ಸೈನಿಕರು ಗಮನಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಎಸ್ ಎಫ್ ಯೋದರು ಗುರಿಯತ್ತ ಗುಂಡು ಹಾರಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದಿಂದ ಯಾವುದೇ ರೀತಿಯ ವೈಮಾನಿಕ ದಾಳಿಯನ್ನು ತಪ್ಪಿಸಲು ಈ ಪ್ರದೇಶದಲ್ಲಿ ಕಟ್ಟುನಿಟ್ಟಿನ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೂ ಮೊದಲು ಜುಲೈ 16 ಮತ್ತು 6 ರಂದು ಪೊಂಚ್ ಮತ್ತು ಸಾಂಬಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಚಟುವಟಿಕೆ ಕಂಡುಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com