ಕೋವಿಡ್-19: ದೇಶದಲ್ಲಿ 5.25 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ, ಸಕ್ರಿಯ ಪ್ರಕರಣಗಳಲ್ಲಿ ಏರಿಕೆ
ದೇಶದಲ್ಲಿ ಕೊರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.
Published: 24th July 2022 12:49 PM | Last Updated: 24th July 2022 12:49 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕೊರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,26,033ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 2, 100 ಕೇಸ್ ಗಳು ಏರಿಕೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,52,200ಕ್ಕೆ ಏರಿಕೆಯಾಗಿದೆ.
ಒಟ್ಟಾರೇ ಸೋಂಕಿತರಲ್ಲಿ ಶೇ. 0.35 ರಷ್ಟು ಸಕ್ರೀಯ ಪ್ರಕರಣಗಳಿದ್ದು, ಕೋವಿಡ್-19 ರಾಷ್ಟ್ರೀಯ ಸರಾಸರಿ ಚೇತರಿಕೆ ಪ್ರಮಾಣ ಶೇ. 98.45 ರಷ್ಟಿದೆ. ಇಲ್ಲಿವರೆಗೂ 2, 01, 99,33,45 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
India records 20,279 new COVID19 cases today; Active caseload at 1,52,200 pic.twitter.com/ZPqVO3luQD
— ANI (@ANI) July 24, 2022