ನಿನ್ನೆ ತಿರುವಳ್ಳೂರ್ ಇಂದು ಕಡಲೂರ್: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸಾಲು ಸಾಲು ಆತ್ಮಹತ್ಯೆ!

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಇಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಾವನ್ನಪ್ಪಿದ ಮೂರನೇ ವಿದ್ಯಾರ್ಥಿನಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಇಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಾವನ್ನಪ್ಪಿದ ಮೂರನೇ ವಿದ್ಯಾರ್ಥಿನಿಯಾಗಿದ್ದಾರೆ.

ಬಾಲಕಿಯ ಮನೆಯಲ್ಲಿ ಪತ್ತೆಯಾದ ಸೂಸೈಡ್ ನೋಟ್‌ನಲ್ಲಿ ಆಕೆಯ ಪೋಷಕರು ಭಾರತೀಯ ಆಡಳಿತ ಸೇವೆಗೆ (ಐಎಎಸ್) ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕೆಂದು ಬಯಸಿದ್ದರು. ಹೀಗಾಗಿ ಅದು ನನ್ನನ್ನು ಅಪಾರ ಒತ್ತಡಕ್ಕೆ ಸಿಲುಕಿಸಿತ್ತು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.  

ತಾಯಿ ಗದರಿಸಿದ್ದರಿಂದ ಬಾಲಕಿ ನೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಹದಿಹರೆಯದ ವಿದ್ಯಾರ್ಥಿನಿಯರ ಸರಣಿ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ.

ತಿರುವಳ್ಳೂರು ತಿರುಟ್ಟಣಿ ಮೂಲದ ಸೇಕ್ರೆಡ್ ಹಾರ್ಟ್ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾದ ಒಂದು ದಿನದ ನಂತರ  ಈ ಘಟನೆ ಸಂಭವಿಸಿದೆ. ತಿರುವಳ್ಳೂರು ಪ್ರಕರಣವನ್ನು ರಾಜ್ಯ ಪೊಲೀಸರ ವಿಶೇಷ ಸಿಬಿ-ಸಿಐಡಿ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಸಿಬಿ-ಸಿಐಡಿ ಜುಲೈ 13 ರಂದು ನಡೆದ ಕಲ್ಲಕುರಿಚಿ ಜಿಲ್ಲೆಯಲ್ಲಿ 12 ನೇ ತರಗತಿಯ ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆ ನಡೆಸುತ್ತಿದೆ.  ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಸಾವಿಗೆ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು. ಘಟನೆಯಲ್ಲಿ ಬೆಂಕಿ ಹಚ್ಚಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು.

ಕಲ್ಲಾಕುರಿಚಿ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳ ಬಗ್ಗೆ ಸಿಬಿ-ಸಿಐಡಿ ತನಿಖೆ ನಡೆಸುವಂತೆಯೂ ಹೈಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com