ಸೋನಿಯಾ ಇಡಿ ತನಿಖೆಗೆ ವಿರೋಧ, ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ರಾಹುಲ್ ಸೇರಿ ಹಲವು ಮುಖಂಡರ ಬಂಧನ

ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಭವನದವರೆಗೂ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಭವನದವರೆಗೂ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂಡಾ ಬಂಧಿಸಲಾಗಿದೆ. ಈ ಮಧ್ಯೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಇಡಿ ತನಿಖೆಯೂ ನಡೆಯುತ್ತಿದೆ. 

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಲ್ಲಾ ಕಾಂಗ್ರೆಸ್ ಸಂಸದರು ಇಲ್ಲಿಗೆ ಬಂದಿದ್ದಾರೆ. ಹಣದುಬ್ಬರ, ನಿರುದ್ಯೋಗದ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಪೊಲೀಸರು ಇಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ಸಂಸತ್ ಒಳಗಡೆಯೂ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಕಚೇರಿ ಬಳಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸುವುದರೊಂದಿಗೆ ಸೋನಿಯಾ ಗಾಂಧಿ ಅವರ ಇಡಿ ತನಿಖೆಗೆ ವಿರೋಧ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com