ಲಾಕ್‌ಡೌನ್ ಉಲ್ಲಂಘಿಸಿದ ವಲಸೆ ಕಾರ್ಮಿಕರ ವಿರುದ್ಧದ ಕೇಸ್ ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅಸ್ತು

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಅನುಮೋದನೆ ನೀಡಿದ್ದಾರೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಪ್ರಕರಣಗಳನ್ನು ದೆಹಲಿ ಸರ್ಕಾರದ ಪ್ರಾಸಿಕ್ಯೂಷನ್ ನಿರ್ದೇಶನಾಲಯ ದಾಖಲಿಸಿದೆ ಎಂದು ಪ್ರಕಟಣೆ ಹೇಳಿದೆ. 

ಪ್ರಕಟಣೆಯ ಪ್ರಕಾರ, ಸಕ್ಸೇನಾ ಅವರು 100ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಒಳಗೊಂಡಿರುವ ಇದೇ ರೀತಿಯ 10 ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಬಡ ವಲಸಿಗರು ಮಾಡಿದ ಈ ಉಲ್ಲಂಘನೆಗಳು ಮೂಲಭೂತವಾಗಿ ಕ್ಷುಲ್ಲಕ ಮತ್ತು ತೀವ್ರ ಸಂಕಟದ ಪರಿಸ್ಥಿತಿಯಲ್ಲಿವೆ. ಮಾನವೀಯ ಮತ್ತು ತಾರ್ಕಿಕ ದೃಷ್ಟಿಕೋನದಿಂದ ಸಕ್ಸೇನಾ ಅವರು ಈ ನಿರ್ಧಾರ ತೆಗೆದುಕೊಂಡಿದ್ದು, ಇದರಿಂದ ಕಾರ್ಮಿಕರು "ಅನಗತ್ಯ ಕಿರುಕುಳ ಮತ್ತು ಓಡಾಟದಿಂದ" ತಪ್ಪಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com