ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 
ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಗೌರವ ನಮನ
ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಗೌರವ ನಮನ

ನವದೆಹಲಿ: 1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೆಹಲಿಯ ರಾಷ್ಟ್ರೀಯ ಯುದ್ದ ಸ್ಮಾರಕ ಬಳಿ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ತಾಯ್ನಾಡನ್ನು ರಕ್ಷಿಸಿದ ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ, ಪರಾಕ್ರಮ ಮತ್ತು ಸಂಕಲ್ಪದ ಸಂಕೇತವಾಗಿದೆ. ಭಾರತ ಮಾತೆಯನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಎಲ್ಲ ವೀರ ಯೋಧರಿಗೆ ನಾನು ನಮಿಸುತ್ತೇನೆ. ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ದೇಶವಾಸಿಗಳೆಲ್ಲರೂ ಸದಾ ಋಣಿಗಳಾಗಿರುತ್ತಾರೆ. ಜೈ ಹಿಂದ್ ಎಂದು ರಾಷ್ಟ್ರಪತಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ಭಾರತಾಂಬೆಯ ಹೆಮ್ಮೆಯ ಮತ್ತು ವೈಭವದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಮಾತೃಭೂಮಿ ರಕ್ಷಣೆಯಲ್ಲಿ ತಮ್ಮ ಶೌರ್ಯವನ್ನು ಸಾಧಿಸಿದ ದೇಶದ ಎಲ್ಲ ಪುತ್ರರಿಗೆ ವಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಗೌರವ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com