ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್

ಕೊಚ್ಚಿನ್: ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಹಾಲಿನ ಮತ್ತು ಪ್ಯಾಕೇಜ್ಡ್ ದಿನಸಿ ವಸ್ತುಗಳ ಮೇಲಿನ ಜಿಎಸ್ ಟಿ ಹೇರಿಕೆಯನ್ನು ನೇರವಾಗಿಯೇ ವಿರೋಧಿಸಿರುವ ಕೇರಳ ಸರ್ಕಾರ ಇದೀಗ ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೆ ಇದು ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೇರಳ ತೆಗೆದುಕೊಂಡ ನಿಲುವಾಗಿದ್ದು, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತಗ್ಗಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಪತ್ರ ಬರೆದಿದೆ ಎಂದು ಹೇಳಿದ್ದಾರೆ.

ಕೇರಳದ ಮೂಲಸೌಕರ್ಯ ಅಭಿವೃದ್ಧಿ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಡ್ಡಿ
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನು ಮುಂದುವರೆಸಿರುವ ವಿಜಯನ್ ಅವರು, ಕೇರಳದ ಮೂಲಸೌಕರ್ಯ ಅಭಿವೃದ್ಧಿ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಾಲದ ಮಿತಿಯನ್ನು ನಿರ್ಬಂಧಿಸುವ ಮೂಲಕ ಕೇರಳದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ತಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 

ಕೇಂದ್ರ ಹಣಕಾಸು ಸಚಿವಾಲಯದ ಬೇಡಿಕೆಗೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, 'ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಸಾಲಗಳು ಸರ್ಕಾರದ ಸಾಲವಲ್ಲ, ಏಕೆಂದರೆ ಅದು ಕಾರ್ಪೊರೇಟ್ ಸಂಸ್ಥೆಯಾಗಿದೆ. KIIFB ಮತ್ತು ಕೇರಳ ಸಾಮಾಜಿಕ ಭದ್ರತಾ ಪಿಂಚಣಿ ಲಿಮಿಟೆಡ್ (KSSPL) ಗಳ ಸಾಲವನ್ನು ರಾಜ್ಯದ ಖಾತೆಗೆ ಸೇರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವು ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದೆ ಎಂದು ಅವರು ಹೇಳಿದರು.

ಇದೇ ವೇಳೆ, ಕೋವಿಡ್-ಪ್ರೇರಿತ ಆರ್ಥಿಕ ಕುಸಿತವನ್ನು ನಿವಾರಿಸಲು ಸರ್ಕಾರಗಳು ಹೆಚ್ಚಿನ ಹೂಡಿಕೆ ಮಾಡಬೇಕು ಎಂದು ಪಿಣರಾಯಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕೋವಿಡ್ -19 ಲಾಕ್‌ಡೌನ್ ಅವಧಿಯಲ್ಲಿ ಆಹಾರ ಕಿಟ್‌ಗಳು ಮತ್ತು ಇತರ ಉದ್ದೇಶಗಳಿಗಾಗಿ ಕೇರಳ ಸರ್ಕಾರ ಮಾಡಿದ ವೆಚ್ಚವನ್ನು ಅವರು ನೆನಪಿಸಿಕೊಂಡರು. ಆರ್ಥಿಕತೆಯ ಮೇಲೆ ಕೋವಿಡ್ ಪ್ರಭಾವದಿಂದ ದೇಶವು ಇನ್ನೂ ಹೊರಬಂದಿಲ್ಲ. ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವ ನಿರ್ಧಾರವನ್ನು ಹಿಂಪಡೆಯುವಂತೆ ಪ್ರಧಾನಿಗೆ ಪತ್ರ ಬರೆದಿರುವುದಾಗಿಯೂ ಅವರು ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com