ಭಾರತದಲ್ಲಿ ಕೊರೋನಾ ಏರಿಳಿತ: 24 ಗಂಟೆಗಳಲ್ಲಿ 18,313 ಹೊಸ ಪ್ರಕರಣ, 57 ಜನರು ಸಾವು

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 57 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,39,38,764 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 57 ಜನರು ಸೋಂಕಿನಿಂದಾಗಿ ಸಾವಿಗೀಡಾಗಿದ್ದು, ಇದರೊಂದಿಗೆ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5,26,167 ಕ್ಕೆ ಏರಿಕೆಯಾಗಿದೆ. ಸದ್ಯ 1,45,026 ಸಕ್ರಿಯ ಪ್ರಕರಣಗಳಿವೆ  ಎಂದಿದೆ.

ಕೋವಿಡ್‌ ಚೇತರಿಕೆ ದರವು ಶೇ 98.45 ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.31ರಷ್ಟಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 20,742 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಒಟ್ಟು 4,32,67,571 ಜನರು ಈವರೆಗೆ ಗುಣಮುಖರಾಗಿದ್ದಾರೆ.

ದೇಶದಾದ್ಯಂತ ಕೋವಿಡ್ ವಿರುದ್ಧದ ಲಸಿಕೆಯನ್ನು  202.79 ಕೋಟಿ ಡೋಸ್ ನೀಡಲಾಗಿದ್ದು, ಈವರೆಗೆ 87.36 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com