ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾಕರು, ಭದ್ರತಾ ಸಿಬ್ಬಂದಿಗಳ ನಡುವೆ ಬೆಳ್ಳಂಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಪಡೆಗಳು
ಭದ್ರತಾ ಪಡೆಗಳು

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾಕರು, ಭದ್ರತಾ ಸಿಬ್ಬಂದಿಗಳ ನಡುವೆ ಬೆಳ್ಳಂಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.

ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಕುಲ್ಗಾಮ್ ನಲ್ಲಿ ಬ್ರೈಹಾರ್ಡ್ ಕತ್ಪೋರಾದಲ್ಲಿ  ಬೆಳಿಗ್ಗೆ ಕಾರ್ಡೋನ್-ಶೋಧ ಕಾರ್ಯಾಚರಣೆ ಪ್ರಾರಂಭಿಸಿದರು. ಈ ವೇಳೆ ಗುಂಡಿನ ಚಕಮಕಿ ಪ್ರಾರಂಭವಾಗಿದೆ.

ಶೋಧಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಲ್ಟ್ರಾಗಳು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರ ಪರಿಣಾಮ ಎನ್ ಕೌಂಟರ್ ನಡೆದಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ಈ ವರೆಗೂ ಯಾವುದೇ ಜೀವ ಹಾನಿಯ ಬಗ್ಗೆ ಮಾಹಿತಿ ಬಂದಿಲ್ಲ, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com