ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ: ಎರಡು ವಾರದಲ್ಲಿ 5ನೇ ಸಾವು
ತಮಿಳುನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಬುಧವಾರ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಶಾಲಾ ಮಕ್ಕಳ ಸಾವಿನ ಪ್ರಕರಣಗಳು ರಾಜ್ಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
Published: 27th July 2022 05:18 PM | Last Updated: 27th July 2022 05:18 PM | A+A A-

ಸಾಂದರ್ಭಿಕ ಚಿತ್ರ
ಚೆನ್ನೈ: ತಮಿಳುನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಬುಧವಾರ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಶಾಲಾ ಮಕ್ಕಳ ಸಾವಿನ ಪ್ರಕರಣಗಳು ರಾಜ್ಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಎರಡು ವಾರಗಳಲ್ಲಿ ಇದು ಐದನೇ ಪ್ರಕರಣ ಮತ್ತು ಕೇವಲ 24 ಗಂಟೆಗಳಲ್ಲಿ ಎರಡನೇ ಆತ್ಮಹತ್ಯೆ ಪ್ರಕರಣವಾಗಿದೆ.
ಶಿವಗಂಗಾ ಜಿಲ್ಲೆಯ ತನ್ನ ಮನೆಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರವನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನು ಓದಿ: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ: ಕಳೆದ 2 ವಾರಗಳಲ್ಲಿ ನಾಲ್ವರು ಸಾವು
ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಳು. ಆದರೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಬಾಲಕಿ ದೀರ್ಘಕಾಲದ, ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಕಡಲೂರು ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಳು. ಬಾಲಕಿಯ ಮನೆಯಲ್ಲಿ ಪತ್ತೆಯಾದ ಸೂಸೈಡ್ ನೋಟ್‌ನಲ್ಲಿ ಆಕೆಯ ಪೋಷಕರು ಭಾರತೀಯ ಆಡಳಿತ ಸೇವೆಗೆ(ಐಎಎಸ್) ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕೆಂದು ಬಯಸಿದ್ದರು. ಹೀಗಾಗಿ ಅದು ನನ್ನನ್ನು ಅಪಾರ ಒತ್ತಡಕ್ಕೆ ಸಿಲುಕಿಸಿತ್ತು ಎಂದು ಉಲ್ಲೇಖಿಸಲಾಗಿತ್ತು.
ಸೋಮವಾರ ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಕಲ್ಲಾಕುರಿಚಿ ಜಿಲ್ಲೆಯಲ್ಲಿ ಜುಲೈ 13 ರಂದು ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು, ಈ ಸಾವುಗಳ ಸರಣಿಯಲ್ಲಿ ಮೊದಲನೆಯದು. ಈ ಪ್ರಕರಣ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.