ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ
ನವದೆಹಲಿ: ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್‌ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.
ಈ ಹಿಂದೆ, ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಪಿಎಫ್ಐ, ಎಸ್‌ಡಿಪಿಐ ಸಂಘಟನೆಯವರು ಇಂತಹ ಕೃತ್ಯದ ಹಿಂದಿದ್ದಾರೆ. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂತಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದರು.
ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿದ್ದಾರೆ. ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚಿಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
Related Article
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ, 15ಕ್ಕೂ ಹೆಚ್ಚು ಮಂದಿಯ ವಿಚಾರಣೆ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್: ಪ್ರಮೋದ್ ಮುತಾಲಿಕ್ ಆಕ್ರೋಶ
ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ. ಅಶ್ವತ್ಥನಾರಾಯಣ
ರಾಜ್ಯದಲ್ಲಿ ಅಗತ್ಯ ಬಿದ್ದರೆ ಯೋಗಿ ಮಾಡೆಲ್ ರೂಲ್ಸ್ ಜಾರಿ, ಕೋಮುಸೌಹಾರ್ದ ಕದಡುವ ಶಕ್ತಿಗಳಿಗೆ ಕಡಿವಾಣ: ಸಿಎಂ ಬೊಮ್ಮಾಯಿ
ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ