ಕೇಂದ್ರ ಚುನಾವಣಾ ಆಯೋಗದ ಕಚೇರಿ
ಕೇಂದ್ರ ಚುನಾವಣಾ ಆಯೋಗದ ಕಚೇರಿ

17 ವರ್ಷಕ್ಕಿಂತ ಮೇಲ್ಪಟ್ಟವರು ಮತದಾರರಾಗಲು ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದು: ಇಸಿ

ಮತದಾನದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು 17 ವರ್ಷಕ್ಕಿಂತ ಮೇಲ್ಪಟ್ಟವರು 18 ವರ್ಷ ತುಂಬಿದ ನಂತರ ಮತದಾರರಾಗಿ ನೋಂದಾಯಿಸಲು...

ನವದೆಹಲಿ: ಮತದಾನದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು 17 ವರ್ಷಕ್ಕಿಂತ ಮೇಲ್ಪಟ್ಟವರು 18 ವರ್ಷ ತುಂಬಿದ ನಂತರ ಮತದಾರರಾಗಿ ನೋಂದಾಯಿಸಲು ಮುಂಗಡವಾಗಿ ಅರ್ಜಿ ಸಲ್ಲಿಸಬಹುದು ಎಂದು ಗುರುವಾರ ಹೇಳಿದೆ.

ಇತ್ತೀಚಿನವರೆಗೂ, ನಿರ್ದಿಷ್ಟ ವರ್ಷದ ಜನವರಿ 1 ರಂದು ಅಥವಾ ಅದಕ್ಕಿಂತ ಮೊದಲು 18 ವರ್ಷ ತುಂಬಿದ ಜನರು ಮಾತ್ರ ಮತದಾರರ ಪಟ್ಟಿಯಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು ಅರ್ಹರಾಗಿದ್ದರು. ಜನವರಿ 1 ರ ನಂತರ 18 ವರ್ಷ ತುಂಬಿದರೂ ಮತದಾರರಾಗಿ ನೋಂದಾಯಿಸಲು ಒಂದು ವರ್ಷ ಪೂರ್ತಿ ಕಾಯಬೇಕಾಗಿತ್ತು.

ಚುನಾವಣಾ ಕಾನೂನಿನ ಬದಲಾವಣೆಯ ನಂತರ, ಜನರು ಜನವರಿ 1, ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1 ರಂದು 18ನೇ ವರ್ಷಕ್ಕೆ ಕಾಲಿಟ್ಟಾಗ ಮತದಾರರಾಗಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಇಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಸಮಿತಿಯು 17 ವರ್ಷಕ್ಕಿಂತ ಮೇಲ್ಪಟ್ಟ, ಇನ್ನೂ 18 ವರ್ಷ ತುಂಬದ ಜನ ಮತದಾರರಾಗಿ ಮುಂಚಿತವಾಗಿ ನೋಂದಾಯಿಸಿಕೊಳ್ಳಲು ತಂತ್ರಜ್ಞಾನ ಅಭಿವೃದ್ಧಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಗಳಿಗೆ ನಿರ್ದೇಶನ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com