ನಾನು ಪಿತೂರಿಯ ಬಲಿಪಶು, ಸಮಯವೇ ಎಲ್ಲದಕ್ಕೂ ಉತ್ತರಿಸಲಿದೆ: ಬಂಧಿತ ಪಾರ್ಥ ಚಟರ್ಜಿ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾಗೊಳಿಸಿ, ಪಕ್ಷದಿಂದ ಅಮಾನತುಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. 'ಇದೆಲ್ಲದಕ್ಕೂ ಸಮಯವೇ ಉತ್ತರಿಸಲಿದೆ' ಎಂದು ಅವರು ತಿಳಿಸಿದ್ದಾರೆ.
ಪಾರ್ಥ ಚಟರ್ಜಿ-ಅರ್ಪಿತಾ ಮುಖರ್ಜಿ
ಪಾರ್ಥ ಚಟರ್ಜಿ-ಅರ್ಪಿತಾ ಮುಖರ್ಜಿ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾಗೊಳಿಸಿ, ಪಕ್ಷದಿಂದ ಅಮಾನತುಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. 'ಇದೆಲ್ಲದಕ್ಕೂ ಸಮಯವೇ ಉತ್ತರಿಸಲಿದೆ' ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಿ, ಪಕ್ಷದಿಂದಲೂ ಅಮಾನತುಗೊಳಿಸಿದ ಬಳಿಕ, ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್‌ಮೆಂಟ್‌ಗಳಿಂದ ಭಾರಿ ಪ್ರಮಾಣದ ಹಣವನ್ನು ವಶಪಡಿಸಿಕೊಂಡ ನಂತರ ಟಿಎಂಸಿ ನಾಯಕ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ವೈದ್ಯಕೀಯ ತಪಾಸಣೆಯ ನಂತರ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಇಬ್ಬರನ್ನೂ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಇ.ಡಿ ಕಚೇರಿಯೊಳಗೆ ಕರೆದೊಯ್ಯಲಾಗಿದೆ. ಈ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಪಿತೂರಿಯ ಬಲಿಪಶು' ಎಂದಿದ್ದಾರೆ.

ಜುಲೈ 28 ರಂದು ರಾಜ್ಯ ಸಚಿವ ಸಂಪುಟದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ, ಸಂಸದೀಯ ವ್ಯವಹಾರಗಳು, ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯುನ್ಮಾನ, ಸಾರ್ವಜನಿಕ ಉದ್ಯಮಗಳು ಮತ್ತು ಕೈಗಾರಿಕಾ ಪುನರ್ನಿರ್ಮಾಣ ಖಾತೆಗಳಿಂದ ಪಾರ್ಥ ಚಟರ್ಜಿ ಅವರನ್ನು ವಜಾಗೊಳಿಸಲಾಯಿತು.

ಈ ಹಿಂದೆ, ಚಟರ್ಜಿ ಬಂಧನದ ನಂತರ ಭ್ರಷ್ಟಾಚಾರದ ಬಗ್ಗೆ ಕಠಿಣವಾಗಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಟಿಎಂಸಿ 'ಕಟ್ಟುನಿಟ್ಟಿನ ಪಕ್ಷ' ವಾಗಿರುವುದರಿಂದ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದಾಗಿ ಹೇಳಿದರು.

ಕಲ್ಕತ್ತಾ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ), ಪಶ್ಚಿಮ ಬಂಗಾಳ ಸೇವಾ ಆಯೋಗ (ಎಸ್‌ಎಸ್‌ಸಿ)ದ ಶಿಫಾರಸಿನ ಮೇರೆಗೆ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರು ಮತ್ತು ಗ್ರೂಪ್-ಸಿ ಮತ್ತು ಡಿ ಸಿಬ್ಬಂದಿ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿದೆ. ಈ ವೇಳೆ ಇ.ಡಿ ಹಗರಣದಲ್ಲಿ ಹಣದ ಜಾಡು ಹಿಡಿದಿದೆ. ಅಕ್ರಮಗಳು ನಡೆದಿರುವ ಸಮಯದಲ್ಲಿ ಪಾರ್ಥ ಚಟರ್ಜಿ ಶಿಕ್ಷಣ ಸಚಿವರಾಗಿದ್ದರು.

ಚಟರ್ಜಿಯವರ ನಿಕಟವರ್ತಿ ಆಗಿರುವ ಅರ್ಪಿತಾ ಮುಖರ್ಜಿ ಅವರ ನಿವಾಸದಿಂದ ಇ.ಡಿ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದೆ. ಆಕೆಯ ವಿಚಾರಣೆಯ ಸಮಯದಲ್ಲಿ, ಈ ನಗದು ಪಾರ್ಥ ಚಟರ್ಜಿಗೆ ಸೇರಿದ್ದಾಗಿದ್ದು, ಇನ್ನು ಒಂದೆರಡು ದಿನಗಳಲ್ಲಿ ತಮ್ಮ ಮನೆಯಿಂದ ಹಣವನ್ನು ಸ್ಥಳಾಂತರಿಸುವ ಯೋಜನೆಯಿತ್ತು. ಆದರೆ, ತನಿಖಾ ಸಂಸ್ಥೆಗಳ ದಾಳಿಗಳು ಯೋಜನೆಯನ್ನು ವಿಫಲಗೊಳಿಸಿದವು ಎಂದು ತಿಳಿಸಿದ್ದಾರೆ.

Related Article

ಶಿಕ್ಷಕರ ನೇಮಕಾತಿ ಹಗರಣ: ಪಕ್ಷದ ಎಲ್ಲಾ ಹುದ್ದೆಗಳಿಂದಲೂ ಪಾರ್ಥ ಚಟರ್ಜಿ ವಜಾ

ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಾರ್ಥ ಚಟರ್ಜಿಯನ್ನು ಸಂಪುಟದಿಂದ ವಜಾಗೊಳಿಸಿದ ಮಮತಾ

ಬಂಧಿತ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನ ಮತ್ತು ಪಕ್ಷದಿಂದ ವಜಾಗೊಳಿಸಿ: ಟಿಎಂಸಿ ನಾಯಕರ ಆಗ್ರಹ

ಬಂಧಿತ ಸಚಿವ ಪಾರ್ಥ ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ

ಪಾರ್ಥ ಚಟರ್ಜಿ ಬಂಧನದ ಬಗ್ಗೆ ಮೌನ ಮುರಿದ ದೀದಿ: ತನಿಖಾ ಸಂಸ್ಥೆ ಬಳಸಿಕೊಂಡು ಪಕ್ಷ ಒಡೆಯಲು ಸಾಧ್ಯವಿಲ್ಲ ಎಂದ ಪಶ್ಚಿಮ ಬಂಗಾಳ ಸಿಎಂ

ಬಂಧನದ ಬಳಿಕ ಸಿಎಂ ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ್ದ ಸಚಿವ ಪಾರ್ಥ ಚಟರ್ಜಿ; ಮೌನವಹಿಸಿದ ದೀದಿ!

ಸಚಿವರ ಆಪ್ತೆ ಮನೆಲ್ಲಿ 20 ಕೋಟಿ ಜಪ್ತಿ: ಬಂಧಿತ ಸಚಿವ ಪಾರ್ಥ ಸಾರಥಿ ಪ್ರಕರಣದಲ್ಲಿ ಪಕ್ಷ ಮಧ್ಯೆ ಪ್ರವೇಶಿಸಲ್ಲ- ಟಿಎಂಸಿ

ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಎರಡು ಇಡಿ ವಶಕ್ಕೆ

ಶಿಕ್ಷಕರ ನೇಮಕಾತಿ ಹಗರಣ: ಇಡಿಯಿಂದ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ, ಸಹಚರೆ ಅರ್ಪಿತಾ ಮುಖರ್ಜಿ ಬಂಧನ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com