ಹಣ ಅಕ್ರಮ ವರ್ಗಾವಣೆ: ಶಿವಸೇನಾ ಸಂಸದ ಸಂಜಯ್ ರಾವುತ್ ನಿವಾಸದಲ್ಲಿ ಇ.ಡಿ ಅಧಿಕಾರಿಗಳ ಶೋಧ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಭಾನುವಾರ ಶೋಧ ಕಾರ್ಯ ನಡೆಸಿದ್ದಾರೆ.
ಸಂಜಯ್ ರಾವುತ್
ಸಂಜಯ್ ರಾವುತ್

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಭಾನುವಾರ ಶೋಧ ಕಾರ್ಯ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾವುತ್, ಅವರ ಪತ್ನಿ ಹಾಗೂ ನಿಕಟವರ್ತಿಗಳು ಭಾಗಿಯಾಗಿದ್ದಾರೆ ಎನ್ನಲಾದ ‘ಪತ್ರಾ ಚಾಲ್‌’ ಭೂ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು.

ಆದರೆ, ರಾವುತ್ ಅವರು ಹಾಜರಾಗಲು ಸಾಧ್ಯವಿಲ್ಲ ಎಂದು ಅವರ ಪರ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ್ದ ಸದ್ಯ ಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿರುವ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ರಾಜಕೀಯ ದ್ವೇಷದ ಕಾರಣ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com