ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ದುಬಾರಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ, ಪ್ರಭಾವಿಗಳ ಪುತ್ರರು ಸೇರಿ 5 ಮಂದಿ ವಿರುದ್ಧ ಪ್ರಕರಣ!

ಕಳೆದ ವಾರ ಹೈದರಾಬಾದ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಭಾವಿಗಳ ಪುತ್ರರು ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published: 03rd June 2022 03:02 PM  |   Last Updated: 03rd June 2022 03:09 PM   |  A+A-


Minor Girl Gang Raped in Bengaluru; Three Arrested

ಸಾಂದರ್ಭಿಕ ಚಿತ್ರ

PTI

ಹೈದರಾಬಾದ್: ಕಳೆದ ವಾರ ಹೈದರಾಬಾದ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಭಾವಿಗಳ ಪುತ್ರರು ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೇ 28 ರಂದು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ಕುರಿತು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ನಂತರ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 9 ಅನ್ನು POCSO ಕಾಯಿದೆಯ 10 ರೊಂದಿಗೆ ಈ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಪ ಪೊಲೀಸ್ ಆಯುಕ್ತ (ಪಶ್ಚಿಮ ವಲಯ) ಜೋಯಲ್ ಡೇವಿಸ್ ಅವರು, ಸಂತ್ರಸ್ತೆಯ ತಂದೆಯ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯ ನಂತರ, ನಾವು ಸೆಕ್ಷನ್‌ಗಳನ್ನು ಬದಲಾಯಿಸಿದ್ದೇವೆ ಮತ್ತು ಪೋಕ್ಸೊ ಕಾಯಿದೆಯ ಸೆಕ್ಷನ್ 9 ಮತ್ತು 10 ಅನ್ನು ಸೇರಿಸಿದ್ದೇವೆ. ಕೃತ್ಯದಲ್ಲಿ ಸುಮಾರು 5 ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟೆಂಪೊದಲ್ಲಿ ಮಹಿಳೆ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ; ಕೆಲ ತಿಂಗಳಲ್ಲೇ ಶಿಕ್ಷೆ ಪ್ರಕಟ!

"ಆಕೆ ಆರೋಪಿಯನ್ನು ಗುರುತಿಸುವ ಸ್ಥಿತಿಯಲ್ಲಿಲ್ಲ, ಆದ್ದರಿಂದ ನಾವು ಇತರ ತಾಂತ್ರಿಕ ವಿವರಗಳ ಮೂಲಕ ಆರೋಪಿಯನ್ನು ಗುರುತಿಸುವ ಪ್ರಕ್ರಿಯೆಯಲ್ಲಿದ್ದೇವೆ. ಪ್ರಾಥಮಿಕವಾಗಿ, ಆರೋಪಿಗಳು ಸಹ ಬಾಲಾಪರಾಧಿಗಳು ಎಂದು ತಿಳಿದುಬಂದಿದೆ. ದೂರುದಾರರ ಪ್ರಕಾರ, ಮೇ 28 ರಂದು ಅವರ ಮಗಳು ಜೂಬಿಲಿ ಹಿಲ್ಸ್‌ನ ಪಬ್‌ಗೆ ತನ್ನ ಸ್ನೇಹಿತರು ಆಯೋಜಿಸಿದ್ದ ಪಾರ್ಟಿಗೆ ಹೋಗಿದ್ದಳು. ಸಂಜೆ 5.30 ರ ಸುಮಾರಿಗೆ, ಅವಳನ್ನು ಕೆಲವು ವ್ಯಕ್ತಿಗಳು ಕಾರಿನಲ್ಲಿ ಪಬ್‌ನಿಂದ ಹೊರಗೆ ಕರೆದೊಯ್ದರು, ನಂತರ, ಅವರು ನನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಗೈದಿದ್ದಾರೆ. ಆಕೆಯ ಕುತ್ತಿಗೆಯ ಮೇಲೆ ಸಣ್ಣ ಗಾಯಗಳಾಗಿವೆ. ಅಂದಿನಿಂದ ನನ್ನ ಮಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾಳೆ. ವಿಷಯಗಳನ್ನು ನಿಖರವಾಗಿ ಬಹಿರಂಗಪಡಿಸಲು ಆಕೆಗೆ ಸಾಧ್ಯವಾಗುತ್ತಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಇಬ್ಬರು ವಶಕ್ಕೆ
ಇನ್ನು ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಸಂತ್ರಸ್ಥೆಯನ್ನು ಕೆಲ ಯುವಕರು ಮನೆಗೆ ಬಿಡುವುದಾಗಿ ಹೇಳಿ ಜೂಬಿಲಿ ಹಿಲ್ಸ್‌ನ ಅಮ್ನೇಷಿಯಾ ಮತ್ತು ಇನ್ಸೋಮ್ನಿಯಾ ಪಬ್‌ಗಳಿಂದ ಕಾರಿನಲ್ಲಿ ಕರೆದೊಯ್ದಿದ್ದಾರೆ. ಬಾಲಕಿಯ ಕುತ್ತಿಗೆಯಲ್ಲಿ ಗಾಯಗಳಾಗಿರುವುದನ್ನು ಗಮನಿಸಿದ ಪೋಷಕರು ವಿಚಾರಿಸಿದ್ದು, ಕೆಲ ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ತಿಳಿಸಿದ್ದಾರೆ. ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಉಳಿದ ಶೀಘ್ರ ಆರೋಪಿಗಳನ್ನು ಬಂದಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಗಾತಿಯೊಂದಿಗೆ ಅನೈತಿಕ ಸಂಬಂಧ: ಯುವತಿ ಮೇಲೆ ಐವರಿಂದ ರೇಪ್ ಮಾಡಿಸಿ, ವಿಡಿಯೋ ಮಾಡಿದ ಮಹಿಳೆ!!

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಆರೋಪಿ ಎಂದು ಗುರುತಿಸಿದ್ದಾರೆ. ಈತನ ಜೊತೆ ಪರಾರಿಯಾಗಿದ್ದವರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಸೂರಜ್ ಹಾಗೂ ಆದಿ ಎಂಬುವರನ್ನು ಅಧಿಕಾರಿಗಳು ಬಂಧಿಸಿ ಕಾರನ್ನು ವಶಪಡಿಸಿಕೊಂಡಿದ್ದಾರೆ.  
 


Stay up to date on all the latest ರಾಷ್ಟ್ರೀಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp