ವೀಸಾ ಹಗರಣ ಕೇಸ್: ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಣೆ
ಚೀನಾ ಪ್ರಜೆಗಳಿಗೆ ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಶುಕ್ರವಾರ ವಜಾಗೊಳಿಸಿದೆ.
Published: 03rd June 2022 07:06 PM | Last Updated: 04th June 2022 12:53 PM | A+A A-

ಕಾರ್ತಿ ಚಿದಂಬರಂ
ನವದೆಹಲಿ: ಚೀನಾ ಪ್ರಜೆಗಳಿಗೆ ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ಶುಕ್ರವಾರ ವಜಾಗೊಳಿಸಿದೆ.
ಕಾರ್ತಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ ವಿಶೇಷ ನ್ಯಾಯಾಧೀಶ ಎಂಕೆ ನಾಗಪಾಲ್, ಈ ಅರ್ಜಿಯನ್ನು ಪರಿಗಣಿಸಲು ಸಾಕಷ್ಟು ಆಧಾರಗಳು ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ವೀಸಾಕ್ಕಾಗಿ ಲಂಚ ಪ್ರಕರಣ: ಸತತ 3ನೇ ದಿನ ಸಿಬಿಐಯಿಂದ ಕಾರ್ತಿ ಚಿದಂಬರಂ ವಿಚಾರಣೆ
ಪಿ. ಚಿದಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿಕೆ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು.
ಇದೇ ಪ್ರಕರಣದಲ್ಲಿ ಸಿಬಿಐ ದಾಖಲಿಸಿದ ಎಫ್ ಐಆರ್ ನ್ನು ಪರಿಗಣಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತು.