
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.
‘ಆಗ್ಲಾರ್ ಝೈನಾಪೋರಾ ಸಮೀಪ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಇಬ್ಬರು ವಲಸೆ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು, ಕಾರ್ಯಾಚರಣೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಕುಲ್ಗಾಮ್ನಲ್ಲಿ ಶಿಕ್ಷಕಿ ರಜನಿ ಬಾಲಾ ಹತ್ಯೆಯ ನಂತರ ಪಂಡಿತ ಸಮುದಾಯದಲ್ಲಿ ಭೀತಿ ಆವರಿಸಿದ್ದು, ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಇದನ್ನೂ ಓದಿ: ಕಾಶ್ಮೀರಕ್ಕೆ ಮರಳಿ ಬರುವುದಿಲ್ಲ: ಪ್ರತಿಭಟನಾ ನಿರತ ಸರ್ಕಾರಿ ಸಿಬ್ಬಂದಿ
ಭಯೋತ್ಪಾದಕರು ಹಿಂದೂಗಳನ್ನು ಪ್ರತ್ಯೇಕಿಸಿ, ಬೆನ್ನಟ್ಟಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿಯೇ 100ಕ್ಕೂ ಹೆಚ್ಚು ಕುಟುಂಬಗಳು ಕಾಶ್ಮೀರ ಕಣಿವೆ ತೊರೆದು, ಜಮ್ಮುವಿಗೆ ವಲಸೆ ಬಂದಿವೆ.
ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿಯಲ್ಲಿ ನೆಲೆಸಿದ್ದ 300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಈಗಾಗಲೇ ಕಾಶ್ಮೀರ ತೊರೆದಿದ್ದಾರೆ.