ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ವೀಕ್ಷಕರಾಗಿ ಮಲ್ಲಿಕಾರ್ಜುನ ಖರ್ಗೆ, ಭೂಪೇಶ್ ಬಘೇಲ್ ನೇಮಕ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಭೂಪೇಶ್ ಬಾಘೇಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದ್ದಾರೆ.
Published: 05th June 2022 07:03 PM | Last Updated: 05th June 2022 07:03 PM | A+A A-

ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಭೂಪೇಶ್ ಬಘೇಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದ್ದಾರೆ.
ಖರ್ಗೆ ಅವರನ್ನು ಮಹಾರಾಷ್ಟ್ರಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಿದ್ದರೆ, ಬಘೇಲ್ ಮತ್ತು ರಾಜೀವ್ ಶುಕ್ಲಾ ಅವರನ್ನು ಹರಿಯಾಣಕ್ಕೆ, ಪವನ್ ಕುಮಾರ್ ಬನ್ಸಾಲ್ ಮತ್ತು ಟಿಎಸ್ ಸಿಂಗ್ ದೇವ್ ಅವರನ್ನು ರಾಜಸ್ಥಾನಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ಹರಿಯಾಣ, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ರಾಜ್ಯಸಭಾ ಚುನಾವಣೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೇನ್ ಅವರು ಹರಿಯಾಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅಲ್ಲಿ ಎರಡು ಸ್ಥಾನಗಳು ತೆರವಾಗಿವೆ.
ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ, ಆದರೆ ಬಿಜೆಪಿ ಪಕ್ಷೇತರ ಅಭ್ಯರ್ಥಿ, ಮಾಧ್ಯಮ ಉದ್ಯಮಿ ಕಾರ್ತಿಕೇಯ ಶರ್ಮಾ ಅವರಿಗೂ ಬೆಂಬಲ ಘೋಷಿಸಿದೆ.