
ಸಾಂದರ್ಭಿಕ ಚಿತ್ರ
ಹೈದ್ರಾಬಾದ್: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಹೈದರಾಬಾದ್: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ವಕ್ಫ್ ಮಂಡಳಿಯ ಹಿರಿಯ ಅಧಿಕಾರಿ ಪುತ್ರ ಸೇರಿ ಮತ್ತಿಬ್ಬರ ಬಂಧನ
ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ವಾರ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಏನೂ ಅರಿಯದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು.
ಈ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸ್ ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.