ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಬೆನ್ನಲ್ಲೇ ಇದೀಗ ದೇವಾಲಯಗಳು ಟಾರ್ಗೆಟ್!
ದೋಡಾ ಜಿಲ್ಲೆಯ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 06th June 2022 04:53 PM | Last Updated: 06th June 2022 04:53 PM | A+A A-

ವಾಸುಕಿ ನಾಗ ದೇವಸ್ತಾನ
ಭದರ್ವಾ(ಜಮ್ಮು): ದೋಡಾ ಜಿಲ್ಲೆಯ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
17,400 ಅಡಿ ಎತ್ತರದ ಕೈಲಾಸ ಕುಂಡ್ನಲ್ಲಿರುವ ಭಗವಾನ್ ವಾಸುಕಿ ನಾಗ ದೇವಸ್ಥಾನದ ಕೆಲ ಭಾಗಗಳನ್ನು ಧ್ವಂಸ ಮಾಡಲಾಗಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪೋಲಿಸರು ಈ ಕ್ರಮ ಕೈಗೊಂಡಿದ್ದಾರೆ. 'ಹಿಮಚ್ಚಾದಿತ ಪ್ರದೇಶಕ್ಕೆ ಈಗಾಗಲೇ ಪೊಲೀಸ್ ತಂಡವನ್ನು ನಿಯೋಜಿಸಲಾಗಿದ್ದು, ಸತ್ಯಾಂಶಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಣಿವೆ ತೊರೆದ ಶೇ.70ರಷ್ಟು ಕಾಶ್ಮೀರಿ ಪಂಡಿತರು!
ಸಂಪೂರ್ಣ ತನಿಖೆಗಾಗಿ ಭದೇರ್ವಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದು ಜನರು ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಿನಂತಿಸಿದ್ದಾರೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.
ಭದೇರ್ವಾಹ್ನಲ್ಲಿರುವ ಶ್ರೀ ಸನಾತನ ಧರ್ಮ ಸಭಾದ ಅಧ್ಯಕ್ಷ ವೀರೇಂದ್ರ ರಜ್ದಾನ್ ನೀಡಿದ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ತಪ್ಪಿತಸ್ಥರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಜ್ದಾನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಇತ್ತೀಚೆಗೆ ಕಾಶ್ಮೀರದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆದಿತ್ತು. ಇದರಿಂದಾಗಿ ಶೇಕಡ 70ರಷ್ಟು ಕಾಶ್ಮೀರಿ ಪಂಡಿತರು ಕಾಶ್ಮೀರವನ್ನು ತೆರೆದಿದ್ದಾರೆ.