
ರಾಷ್ಟ್ರಪತಿ ಭವನ (ಸಂಗ್ರಹ ಚಿತ್ರ)
ನವದೆಹಲಿ: ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಿದ್ದು, ಜುಲೈ 18ಕ್ಕೆ ಚುನಾವಣೆ ನಡೆಯಲಿದೆ.
ಜುಲೈ 18 ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
Voting for Presidential elections to be held on 18th July, counting of votes on 21st July: Chief Election Commissioner Rajiv Kumar pic.twitter.com/bTvawdiE9I
— ANI (@ANI) June 9, 2022
2022 ರ ಅಧ್ಯಕ್ಷೀಯ ಚುನಾವಣೆಗಳಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಅಂದಹಾಗೆ ಈ ಚುನಾವಣೆಯಲ್ಲಿ ರಾಜ್ಯಸಭಾ ಚುನಾವಣೆಗಳಲ್ಲಿರುವಂತೆ ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
A total of 4,809 electors to vote in the Presidential elections 2022. No political party can issue a whip to its members: Chief Election Commissioner Rajiv Kumar pic.twitter.com/JedXp1OnpG
— ANI (@ANI) June 9, 2022
ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ಕೊನೆಯ ಅಧ್ಯಕ್ಷೀಯ ಚುನಾವಣೆಯು 17 ಜುಲೈ 2017 ರಂದು ನಡೆದಿತ್ತು. 2017 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು ಶೇ.50 ರಷ್ಟು ಮತಗಳು ಎನ್‌ಡಿಎ ಪರವಾಗಿ ಇದ್ದವು. ಒಟ್ಟು 4,880 ಮತದಾರರಲ್ಲಿ 4,109 ಶಾಸಕರು ಮತ್ತು 771 ಸಂಸದರು ಮತ ಚಲಾಯಿಸಿದ್ದರು.