ರಾಜ್ಯಸಭಾ ಚುನಾವಣೆ: ಮತ ಚಲಾಯಿಸಲು ಜೈಲಿನಿಂದ ತಾತ್ಕಾಲಿಕ ಬಿಡುಗಡೆಗೆ ನವಾಬ್ ಮಲಿಕ್ ಅರ್ಜಿ, ಹೈಕೋರ್ಟ್ ನಕಾರ
ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ತಾತ್ಕಾಲಿಕವಾಗಿ ಜೈಲಿನಿಂದ ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
Published: 10th June 2022 12:26 PM | Last Updated: 10th June 2022 03:51 PM | A+A A-

ನವಾಬ್ ಮಲಿಕ್
ಮುಂಬೈ: ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ತಾತ್ಕಾಲಿಕವಾಗಿ ಜೈಲಿನಿಂದ ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ದಿನದ ಮಟ್ಟಿಗೆ ಜಾಮೀನು ನೀಡುವಂತೆ ನವಾಬ್ ಮಲಿಕ್ ನಿನ್ನೆ ದಿನ ವಿಶೇಷ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದರು.
ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೈ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ತಿರಸ್ಕರಿಸಿದ ಒಂದು ಗಂಟೆಯ ನಂತರ ಹೈಕೋರ್ಟ್ ನ ಮತ್ತೊಂದು ಪೀಠ ಕೂಡಾ, ಅರ್ಜಿಯನ್ನು ವಜಾಗೊಳಿಸಿತು.
ವಿಶೇಷ ಕೋರ್ಟ್ ನಿಂದ ತಿರಸ್ಕತಗೊಂಡ ನಂತರವೂ ಪೊಲೀಸ್ ಎಸ್ಕಾರ್ಟ್ ನೊಂದಿಗೆ ಮತ ಚಲಾಯಿಸಲು ನವಾಬ್ ಮಲಿಕ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಧೀಶರಾದ ಭಾರತಿ ಡಾಂಗ್ರೆ ನೇತೃತ್ವದ ಏಕ ಸದಸ್ಯ ನ್ಯಾಯಪೀಠ ಹೇಳಿತು.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಒಂದು ದಿನ ಜಾಮೀನು ಕೋರಿ ನವಾಬ್ ಮಲಿಕ್ ಅರ್ಜಿ
ನವಾಬ್ ಮಲಿಕ್ ಸದ್ಯ ವಿವಿಧ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ನವಾಬ್ ಮಲಿಕ್ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯ, ಖೈದಿಗಳಿಗೆ ಜನಪ್ರತಿನಿಧಿಗಳ ಕಾಯ್ದೆಯಡಿ ಮತ ಚಲಾಯಿಸುವ ಹಕ್ಕು ಇರುವುದಿಲ್ಲ ಎಂದು ಹೇಳಿದೆ.