ಮುಸ್ಲಿಮರ ಪ್ರತಿಭಟನೆ: ಇಡೀ ಭಾರತ ಕಾಶ್ಮೀರದಂತೆ ಕಾಣುತ್ತಿದೆ- ಸುಬ್ರಮಣಿಯನ್ ಸ್ವಾಮಿ
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಮುಸ್ಲಿಮರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಇಡೀ ಭಾರತ ಕಾಶ್ಮೀರದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
Published: 10th June 2022 05:53 PM | Last Updated: 10th June 2022 07:19 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಮುಸ್ಲಿಮರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಇಡೀ ಭಾರತ ಕಾಶ್ಮೀರದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
Rest of India today is looking like Kashmir. We had instead wanted Kashmir to look like the rest of India. Has Amit Shah as Home Minister any clue about a solution ? If the situation does not come under control in the next 48 hours, should Shah remain as HM? Modi’s call.
— Subramanian Swamy (@Swamy39) June 10, 2022
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ ಹಲವೆಡೆ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆಗಳು ನಡೆದಿವೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, 'ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅಪೇಕ್ಷಿಸಿದ್ದೆವು. ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಯಾವುದಾದರೂ ಸುಳಿವು ಇದೆಯೇ? ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಶಾ ಅವರು ಗೃಹ ಸಚಿವರಾಗಿ ಉಳಿಯುತ್ತಾರೆಯೇ? ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಪ್ರವಾದಿ ಕುರಿತು ಹೇಳಿಕೆ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ಹಲವೆಡೆ ಪ್ರತಿಭಟನೆ, ಹಿಂಸಾಚಾರ, ಅಶ್ರುವಾಯು ಪ್ರಯೋಗ
ಪ್ರತಿಭಟನೆ ಏಕೆ?
ಟಿವಿ ಸಂವಾದವೊಂದರಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರಂಭಗೊಂಡ ಪ್ರತಿಭಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಇದರ ಬೆನ್ನಲ್ಲೇ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಲಾಗಿತ್ತು. ಅಲ್ಲದೆ ನೂಪುರ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. ಆದರೆ ಇದೀಗ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಪ್ರವಾದಿ ಬಗ್ಗೆ ಹೇಳಿಕೆಗೆ ಇಸ್ಲಾಮಿಕ್ ರಾಷ್ಟ್ರಗಳ ಪ್ರತಿಭಟನೆ ಹಿಂದೆ ಪಾಕ್ ಕೈವಾಡ: ಗುಪ್ತಚರ ಇಲಾಖೆ