ನವದೆಹಲಿ: ಜಾಮಾ ಮಸೀದಿ ಹೊರಗಡೆ ಪ್ರತಿಭಟನೆ, ಎಫ್ ಐಆರ್ ದಾಖಲಿಸಿದ ಪೊಲೀಸರು
ಪ್ರವಾದಿ ಮೊಹಮ್ಮದ್ ಪೈಗಂಬರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ಬಂಧನಕ್ಕಾಗಿ ಶುಕ್ರವಾರ ಜಾಮಾ ಮಸೀದಿ ಹೊರಗಡೆ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Published: 11th June 2022 12:41 PM | Last Updated: 11th June 2022 02:53 PM | A+A A-

ಜಾಮಾ ಮಸೀದಿ ಬಳಿ ಪ್ರತಿಭಟನೆ
ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ಬಂಧನಕ್ಕಾಗಿ ಶುಕ್ರವಾರ ಜಾಮಾ ಮಸೀದಿ ಹೊರಗಡೆ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಸಿದ್ದ ಮಸೀದಿಯ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಅಪಾರ ಸಂಖ್ಯೆಯ ಪ್ರತಿಭಟನಾಕಾರರು ಭಿತ್ತಿಪತ್ರ ಪ್ರದರ್ಶಿಸಿ, ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಸಂಬಂಧ ಪ್ರತಿಭಟನಾಕಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ, ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಉಪ ಪೊಲೀಸ್ ಆಯುಕ್ತ (ಸೆಂಟ್ರಲ್) ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
ಇದನ್ನೂ ಓದಿ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಹೊರಗಡೆ ಪ್ರತಿಭಟನೆ, 30 ಮಂದಿ ಆರೆಸ್ಟ್
ಶುಕ್ರವಾರದ ಪ್ರಾರ್ಥನೆ ವೇಳೆ ಜಾಮಾ ಮಸೀದಿ ಹತ್ತಿರ ಯಾವಾಗಲೂ ಪೊಲೀಸರು ಇರುತ್ತಾರೆ. 10-15 ನಿಮಿಷಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಲಾಗಿದೆ. ಪರಿಸ್ಥಿತಿ ಶಾಂತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು, ಕೆಲವು ದುಷ್ಕರ್ಮಿಗಳನ್ನು ನಾವು ಗುರುತಿಸಿದ್ದೇವೆ ಮತ್ತು ಇತರರನ್ನು ಗುರುತಿಸುವಲ್ಲಿ ನಮ್ಮ ತಂಡ ಕಾರ್ಯೋನ್ಮುಖವಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.