ಕುಲ್ಗಾಂ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಹತ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
Published: 11th June 2022 08:11 AM | Last Updated: 11th June 2022 11:20 AM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಕುಲ್ಗಾಂನ ಖಾಂಡಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಭಾರತೀಯ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು.
ಇದನ್ನೂ ಓದಿ: ಶೋಫಿಯಾನ್ ನಲ್ಲಿ ಐಇಡಿ ಸ್ಫೋಟ ಪ್ರಕರಣ, ನಾಲ್ವರು ಬಂಧನ: ಪೊಲೀಸರು
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.