ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ! ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆ
ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 3,000 ಹೊಸ ಕೊರೋನಾವೈರಸ್ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.
Published: 11th June 2022 11:42 AM | Last Updated: 11th June 2022 11:44 AM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 3,000 ಹೊಸ ಕೊರೋನಾವೈರಸ್ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.
ಮುಂಬೈಯಲ್ಲಿ ಶುಕ್ರವಾರ ಒಂದೇ ದಿನ 1,956 ಪ್ರಕರಣಗಳು ವರದಿಯಾಗಿವೆ. ಆದರೆ, ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.ಕೋವಿಡ್ ಏರಿಕೆಯೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 79,04,709ಕ್ಕೆ ಏರಿಕೆಯಾಗಿದ್ದು, 1,47,867 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 8,329 ಹೊಸ ಕೇಸ್ ಪತ್ತೆ, 40 ಸಾವಿರ ದಾಟಿದ ಸಕ್ರಿಯ ಪ್ರಕರಣ
ಈ ಮಧ್ಯೆ ರಾಜ್ಯಾದ್ಯಂತ 1,323 ಜನರು ಚೇತರಿಸಿಕೊಂಡಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 77,43,513ಕ್ಕೆ ಏರಿದೆ. ಚೇತರಿಕೆ ಪ್ರಮಾಣ ಶೇ. 97.96 ರಷ್ಟಿದ್ದು, ಮರಣ ಪ್ರಮಾಣ ಶೇ. 1.87 ರಷ್ಟಿದೆ. ಪ್ರಸ್ತುತ ರಾಜ್ಯದಲ್ಲಿ 13, 329 ಸಕ್ರಿಯ ಪ್ರಕರಣಗಳಿರುವುದಾಗಿ ಮಹಾರಾಷ್ಟ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.