ರಾಷ್ಟ್ರಪತಿ ಚುನಾವಣೆ: ಜೂನ್ 15 ರಂದು 22 ಪ್ರತಿಪಕ್ಷ ನಾಯಕರು, ಸಿಎಂಗಳ ಸಭೆ ಕರೆದ ಮಮತಾ ಬ್ಯಾನರ್ಜಿ

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಭಾಗವಹಿಸುವಂತೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ನಾಯಕರಿಗೆ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ  ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇರಳ ಸಿಎಂ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆಯಲಾಗಿದೆ..

"ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳಿಗೆ ಜೂನ್ 15, 2022 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆ ಕರೆದಿದ್ದಾರೆ" ಎಂದು ತೃಣಮೂಲ ಕಾಂಗ್ರೆಸ್ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com