ಪ್ರವಾದಿ ವಿರುದ್ಧ ಹೇಳಿಕೆ ವಿವಾದ: ರಾಂಚಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಇಬ್ಬರ ಸಾವು

ಪ್ರವಾದಿ ಮಹಮ್ಮದ್ ಪೈಂಗಬರ್​​​​ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೂಪುರ್ ಶರ್ಮಾ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

Published: 11th June 2022 10:21 AM  |   Last Updated: 11th June 2022 11:43 AM   |  A+A-


Protest in ranchi

ರಾಂಚಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ.

Online Desk

ರಾಂಚಿ (ಜಾರ್ಖಂಡ್​): ಪ್ರವಾದಿ ಮಹಮ್ಮದ್ ಪೈಂಗಬರ್​​​​ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೂಪುರ್ ಶರ್ಮಾ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನೂಪುರ್ ಹೇಳಿಕೆಗೆ ಜಾರ್ಖಂಡ್​ನ ರಾಂಚಿಯಲ್ಲೂ ಆಕ್ರೋಶ ಭುಗಿಲೆದಿದ್ದು, ಮುಸ್ಲಿಂ ಸಂಘಟನೆಗಳು ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಇದರಂತೆ ಈ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಇದೀಗ ಇಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಪ್ರಚೋದನಕಾರಿ ಪೋಸ್ಟ್: ನೂಪುರ್ ಶರ್ಮಾ, ನವೀನ್ ಜಿಂದಾಲ್, ಓವೈಸಿ ಇತರರ ವಿರುದ್ಧ ಎಫ್ ಐಆರ್ ದಾಖಲು

ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅನೇಕರು ಗಾಯಗೊಂಡಿದ್ದಾರೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಹಲವೆಡೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪ್ರವಾದಿ ಮಹಮ್ಮದ್​ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್​ ಶರ್ಮಾ ವಿರುದ್ಧ ನಿನ್ನೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಹೊರಗಡೆ ಪ್ರತಿಭಟನೆ, 30 ಮಂದಿ ಆರೆಸ್ಟ್

ಶುಕ್ರವಾರದ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಉತ್ತರಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಉದ್ದೇಶದಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್​​​ಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಇಟ್ಟಿದ್ದಾರೆ.

ಪ್ರಮುಖವಾಗಿ ಮಹಾರಾಷ್ಟ್ರ, ಉತ್ತರ ಪ್ರದೇಶ, ಜಮ್ಮು - ಕಾಶ್ಮೀರ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್​​ನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ಆರಂಭವಾಗಿವೆ.

ಇದನ್ನೂ ಓದಿ: ಪ್ರವಾದಿ ಕುರಿತು ಹೇಳಿಕೆ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ಹಲವೆಡೆ ಪ್ರತಿಭಟನೆ, ಹಿಂಸಾಚಾರ, ಅಶ್ರುವಾಯು ಪ್ರಯೋಗ

ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಈ ನಡುವೆ ನೂಪುರ್ ಶರ್ಮಾ ನೀಡಿದ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಕಾಶ್ಮೀರದ ಭದೇರ್ ವಾನಲ್ಲಿ ಪ್ರಚೋದನಕಾರಿ ಭಾಷಣ ಮಾಡಲಾಗಿದ್ದು, ಹೀಗಾಗಿ ಭದೇರ್ ವಾ, ಕಿಶ್ತ್ ವಾರ್, ದೋಡಾನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮುಂಜಾಗ್ರತಾ ಕ್ರವಾಗಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ. ಗುರುವಾರ ರಾತ್ರಿ ದೋಡಾ ಬಳಿಯ ಭದೇರ್ ವಾನಲ್ಲಿ ಹಿಂಸಾಚಾರ ನಡೆದಿತ್ತು. ಶುಕ್ರವಾರ ಜನರು ಭದ್ರತಾ ಪಡೆಗಳ ವಿರುದ್ಧ ಕಲ್ಲು ತೂರಾಟಕ್ಕೆ ಮುಂದಾಗಿದ್ದು, ಈ ವೇಳೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇದಲ್ಲದೆ, ಲಾಲ್ ಚೌಕ್, ಬಟಮಾಲೂ, ತಂಗಪೋರಾದಲ್ಲಿ ಮಹಿಳೆ ಹಾಗೂ ಪುರುಷರು ಫಲಕಗಳನ್ನು ಪ್ರದರ್ಶಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದು ಕಂಡು ಬಂದಿತು.

ಇದನ್ನೂ ಓದಿ: ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈ ಅಲರ್ಟ್

ಉತ್ತರಪ್ರದೇಶದಲ್ಲೂ ಹಿಂಸಾಚಾರ, ಹಲವೆಡೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಉತ್ತರಪ್ರದೇಶದ ರಾಜಧಾನಿ ಲಖನೌ, ಸಹರಾನ್ ಪುರ. ಮೊರಾದಾಬಾದ್, ಭೋಜಪುರ, ದೇವಬಂದ್, ರಾಮಪುರದಲ್ಲಿ ಜನರು ನೂಪುರ್ ಶರ್ಮಾ ವಿರುದ್ಧ ಘೋಷಣೆ ಕೂಗಿ ಭಾರೀ ಪ್ರತಿಭಟನೆ ನಡೆಸಿದರು. ನಮಾಜ್ ಬಳಿಕ ಪ್ರಯಾಗ್ ರಾಜ್ ನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಅಂಗಡಿಗಳು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸರು ಅಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ವೇಳೆ 20ಕ್ಕೂ ಹೆಚ್ಚು ಜನ ಪೊಲೀಸರು ಗಾಯಗೊಂಡಿದ್ದಾರೆ. ಗಲಭೆಯಲ್ಲಿ ಪಾಲ್ಗೊಂಡ 136 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉತ್ತರಪ್ರದೇಶ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆಗಿತ್ಯನಾಥ್ ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸಿದ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.


Stay up to date on all the latest ದೇಶ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp