ದೆಹಲಿಯ ಕರೋಲ್ ಬಾಗ್ ಶೂ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಹತ್ತಿಕೊಂಡ ಬೆಂಕಿ: ನಂದಿಸಲು 39 ಅಗ್ನಿಶಾಮಕ ಟೆಂಡರ್ 

ಮಧ್ಯ ದೆಹಲಿಯ ಕರೋಲ್‌ ಬಾಗ್‌ ಪ್ರದೇಶದ ಶೂ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಹಲವು ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ನಂದಿಸಲು ಸುಮಾರು ಐದು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗಫರ್ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ಟೆಂಡರ್‌ಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದರು
ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಗಫರ್ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ಟೆಂಡರ್‌ಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದರು

ನವದೆಹಲಿ: ಮಧ್ಯ ದೆಹಲಿಯ ಕರೋಲ್‌ ಬಾಗ್‌ ಪ್ರದೇಶದ ಶೂ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಹಲವು ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ನಂದಿಸಲು ಸುಮಾರು ಐದು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿ ನಂದಿಸುವ ಕಾರ್ಯಾಚರಣೆಗಳು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು ಎಂದು ಅವರು ಹೇಳಿದರು. ನಸುಕಿನ ಜಾವ 4.16 ಕ್ಕೆ ಕರೋಲ್ ಬಾಗ್‌ನ ಗಫಾರ್‌ನಲ್ಲಿರುವ ಶೂ ಮಾರುಕಟ್ಟೆಯಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವ ಕರೆ ಬಂತು. 39 ಅಗ್ನಿಶಾಮಕ ಟೆಂಡರ್ ಗಳು ಸ್ಥಳಕ್ಕೆ ಧಾವಿಸಿದವು ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

ಘಟನೆಯಲ್ಲಿ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ, ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದರು. ಬೆಂಕಿ ಹೊತ್ತಿಕೊಂಡ ಯಾವುದೇ ಅಂಗಡಿಗಳು ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹೊಂದಿಲ್ಲ ಎಂದು ಡಿಎಫ್‌ಎಸ್ ನಿರ್ದೇಶಕರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com