ರಾಂಚಿ ಹಿಂಸಾಚಾರ: ಎಫ್‌ಐಆರ್‌ ದಾಖಲು; ಮೃತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿರಲಿಲ್ಲ ಕುಟುಂಬಸ್ಥರು!

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ನಂತರ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ.
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ನಂತರ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ. ಜೊತೆಗೆ ಸಾವಿರಾರು ಜನರ ವಿರುದ್ಧ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಇದೇ ವೇಳೆ ಸುಮಾರು 33 ಗಂಟೆಗಳ ನಂತರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ರಾಂಚಿ ಉಪ ಆಯುಕ್ತ ಛವಿ ರಂಜನ್ ತಿಳಿಸಿದ್ದಾರೆ.

ಶುಕ್ರವಾರದ ಪ್ರಾರ್ಥನೆಯ ನಂತರ ನಗರದಲ್ಲಿ ನಡೆದ ಪ್ರತಿಭಟನೆಗಳು ಮತ್ತು ಘರ್ಷಣೆಗಳಿಂದಾಗಿ ರಾಂಚಿಯ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 3,500 ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ. ಹಿಂಸಾಚಾರದ ವೇಳೆ ಇಬ್ಬರು ಸಾವನ್ನಪ್ಪಿದ್ದರೆ ಎರಡು ಡಜನ್‌ಗಿಂತಲೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಮಾಜಿ ನಾಯಕ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಸುರೇಂದ್ರ ಕುಮಾರ್ ಝಾ ಅವರು ಕ್ಷಿಪ್ರ ಕಾರ್ಯಾಚರಣೆ ಪಡೆ, ಭಯೋತ್ಪಾದನಾ ನಿಗ್ರಹ ದಳ, ವಿಶೇಷ ಕಾರ್ಯಪಡೆ ಮತ್ತು ಜಿಲ್ಲಾ ಪೊಲೀಸರನ್ನು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com