ಕೋವಿಡ್ ಸಂಬಂಧಿ ಅನಾರೋಗ್ಯ; ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,

ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ  ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com