ಹಣ ಅಕ್ರಮ ವರ್ಗಾವಣೆ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಗೆ 14 ದಿನ ನ್ಯಾಯಾಂಗ ಬಂಧನ!!

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
Updated on

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ,

ಸತ್ಯೇಂದ್ರ ಜೈನ್ ಅವರ ಕಸ್ಟಡಿ ಅವಧಿ ಇಂದಿಗೆ ಕೊನೆಯಾದ ಹಿನ್ನಲೆಯಲ್ಲಿ ಇಲ್ಲಿನ ರಾವುಜ್ ಅವೆನ್ಯೂ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.  ಇಂದಿನವರೆಗೂ ಅವರನ್ನು ಕೋರ್ಟ್‌ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಜೈನ್‌ ಅವರ ನಿವಾಸ ಮತ್ತು ಸಂಬಂಧಿತ ಇತರ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ರೂ.2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com